Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಜಿಲ್ಲೆಯಲ್ಲಿ ಹರಡುತ್ತಿರುವ ಡೆಂಗ್ಯೂ ನಿಯಂತ್ರಿಸಿ: ಡಾ.ಕುಮಾರ

ಮಂಡ್ಯ ಜಿಲ್ಲೆಯಲ್ಲಿ ಡೆಂಗ್ಯೂ ರೋಗ ಪ್ರಕರಣಗಳು ಹೆಚ್ಚುತ್ತಿದ್ದು, ಡೆಂಗ್ಯೂ ರೋಗ ನಿಯಂತ್ರಣ ಮಾಡಲು ಅಗತ್ಯ ಕ್ರಮವಹಿಸಿ ಎಂದು ಡಾ.ಕುಮಾರ ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ರಾಷ್ಟ್ರೀಯ ಡೆಂಗ್ಯೂ ನಿಯಂತ್ರಣ ದಿನದ ಪ್ರಯುಕ್ತ ಡೆಂಗ್ಯೂ ನಿಯಂತ್ರಣ ಕುರಿತು ಅಂತರ ಇಲಾಖೆಯ ಸಮನ್ವಯ ಸಭೆ ನಡೆಸಿ ಮಾತನಾಡಿದರು. ಜಿಲ್ಲೆಯಲ್ಲಿರುವ ಹಾಸ್ಟೆಲ್ ಗಳಿಗೆ ಮಕ್ಕಳಿಗೆ ಕಡ್ಡಾಯವಾಗಿ ಸೊಳ್ಳೆ ಪರದೆ ಬಳಸುವಂತೆ ತಿಳಿಸಿ. ಹಾಸ್ಟಲ್ ಗಳ ಸುತ್ತ ನೀರು ನಿಲ್ಲದಂತೆ ನೋಡಿಕೊಳ್ಳಿ ಎಂದರು.

ಜಿಲ್ಲೆಯಲ್ಲಿ 189 ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತದೆ. ಸಾರ್ವಜನಿಕರು ಮನೆಯ ಸುತ್ತಮುತ್ತ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಹಳೆಯ ಟೈರ್, ತೆಂಗಿನ ಚಿಪ್ಪುಗಳು ಮುಂತಾದ ವಸ್ತುಗಳನ್ನು ತೆರವುಗೊಳಿಸಿ. ಶುದ್ಧ ಕುಡಿಯುವ ನೀರನ್ನು ಬಳಸಿ ಎಂದರು.

ಮಳೆಗಾಲ ಪ್ರಾರಂಭವಾಗಿದ್ದು, ಸ್ಥಳೀಯ ಸಂಸ್ಥೆಗಳು ನಿಗದಿತವಾಗಿ ತಮ್ಮ ವ್ಯಾಪ್ತಿಯ ರಸ್ತೆ ಹಾಗೂ ಚರಂಡಿಗಳನ್ನು ಪರಿಶೀಲಿಸಿ, ಎಲ್ಲಿಯೋ ನೀರು ನಿಂತು ಸೊಳ್ಳೆಗಳ ಉತ್ಪತ್ತಿ ತಾಣವಾಗದಂತೆ ನೋಡಿಕೊಳ್ಳಿ ಎಂದರು.

ಡೆಂಗ್ಯೂ ಪ್ರಕರಣಗಳು ಹೆಚ್ಚು ವರದಿಯಾಗುವ ಸ್ಥಳಗಳನ್ನು ಗುರುತಿಸಿ ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳು ಸಮನ್ವಯವಾಗಿ ಕಾರ್ಯನಿರ್ವಹಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಡೆಂಗ್ಯೂ ರೋಗ ಹರಡದಂತೆ ನಿಯಂತ್ರಿಸಿ ಎಂದರು.

ಸಂಕ್ರಾಮಿಕ ರೋಗಗಳು ಹರಡದಂತೆ ತಡೆಗಟ್ಟಲು ಸಾರ್ವಜನಿಕರಿಗೆ ಶುದ್ಧ, ಸುರಕ್ಷಿತ ಕುಡಿಯುವ ನೀರನ್ನು ಪೂರೈಸುವುದು ಮುಖ್ಯ. ಸ್ಥಳೀಯ ಸಂಸ್ಥೆಗಳು ನೀರನ್ನು ಪರೀಕ್ಷಿಸಿ ವರದಿ ಪಡೆದ ತಕ್ಷಣ ಆರೋಗ್ಯ ಇಲಾಖೆಯೊಂದಿಗೆ ಹಂಚಿಕೊಂಡು ವಿಶ್ಲೇಷಣೆ ನಡೆಸಿ, ನೀರಿನಲ್ಲಿ ರೋಗವಾಹಕ ಅಂಶಗಳು ಕಂಡುಬಂದಲ್ಲಿ ತಕ್ಷಣವೇ ಕ್ರಮ ಕೈಗೊಳ್ಳಬಹುದು ಎಂದರು.

ತಂಬಾಕು ಮಾರಾಟ ನಿಷೇಧ

ಜಿಲ್ಲೆಯಲ್ಲಿರುವ ಶಾಲಾ, ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿರುವ ಅಂಗಡಿಗಳಲ್ಲಿ ತಂಬಾಕು ಮಾರಾಟ ಕಂಡುಬಂದಲ್ಲಿ. ಅಂಗಡಿಗಳ ಪರವಾನಗಿ ರದ್ದು ಪಡಿಸುವಂತೆ ತಿಳಿಸಿದರು.

ಕೆಲವು ಶಾಲೆಯ ಸುತ್ತಮುತ್ತ ತಂಬಾಕು ಮಾರಾಟ ಮಾಡುತ್ತಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿದೆ. ಶಾಲೆಯ ಪ್ರಾಂಶುಪಾಲರು ಹಾಗೂ ಶಿಕ್ಷಕರು ತಮ್ಮ ಶಾಲೆಯ ಸುತ್ತಮುತ್ತಲು 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಮಾರಾಟವಾಗುತ್ತಿಲ್ಲ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದರು.

ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮ ಗಳ ಬಗ್ಗೆ ಅರಿವು ಮೂಡಿಸಿ ಇದರ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಮಾಡಿ ಜಿಲ್ಲೆಯನ್ನು ತಂಬಾಕು ಮುಕ್ತ ವಲಯವನ್ನಾಗಿ ಮಾಡಬೇಕು ಎಂದು ಹೇಳಿದರು.

ತಂಬಾಕು ಮಾರಾಟ ಮಾಡುವವರು ಇನ್ನೂ ಮುಂದೆ ನಗರ ಸಭೆ/ಪುರಸಭೆ/ಪಟ್ಟಣ ಪಂಚಾಯತಿಗಳಲ್ಲಿ ತಂಬಾಕು ಮಾರಾಟ ರಹದಾರಿ ಪಡೆಯಬೇಕಿರುತ್ತದೆ. ಇದಕ್ಕೆ ನಗರ ಸ್ಥಳೀಯ ಸಂಸ್ಥೆಗಳು ಸಮಿತಿ ರಚಿಸಿಕೊಂಡು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶವು ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ 2023 ರ ಏಪ್ರಿಲ್ ಮಾಹೆಯಿಂದ ಮಾರ್ಚ್ 2024 ರ ವರೆಗೆ ಮಂಡ್ಯ ಜಿಲ್ಲೆಯಲ್ಲಿ ಒಟ್ಟು 88 ಕಡೆ ಕೋಟ್ಪಾ ದಾಳಿ ನಡೆಸಿ ರೂ 1,34,860 ಹಣ ದಂಡ ವಿಧಿಸಿದೆ. 1031 ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ ಮೋಹನ್, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್, ಆರ್.ಸಿ.ಎಚ್ ಅಧಿಕಾರಿ ಡಾ.ಅನಿಲ್ ಕುಮಾರ್, ಏಡ್ಸ್ ನಿಯಂತ್ರಣಾಧಿಕಾರಿ ಡಾ.ಎಮ್.ಎನ್ ಆಶಾಲತಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕುಮಾರ್, ಕುಟುಂಬ ಕಲ್ಯಾಣಾಧಿಕಾರಿ ಡಾ.ಬೆಟ್ಟಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಎಸ್ ರಾಜಮೂರ್ತಿ, ಪದವಿ ಪೂರ್ವ ಕಾಲೇಜಿನ ಉಪ ನಿರ್ದೇಶಕ ಸಿ.ಚೆಲುವಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!