Thursday, September 19, 2024

ಪ್ರಾಯೋಗಿಕ ಆವೃತ್ತಿ

ಕಾಂಗ್ರೆಸ್ ಪಕ್ಷದಿಂದ ಹಾಲಹಳ್ಳಿ ಅಶೋಕ್ ಗೆ ಸನ್ಮಾನ

ಕಳೆದ 25 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿ ”ಸಹಕಾರ ರತ್ನ ಪ್ರಶಸ್ತಿ” ಪ್ರಶಸ್ತಿ ಪಡೆದಿರುವ ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಲಹಳ್ಳಿ ಅಶೋಕ್ ಅವರನ್ನು ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಎಂಡಿಸಿಸಿ ಬ್ಯಾಂಕ್ ಯೂನಿಯನ್ ಪದಾಧಿಕಾರಿಗಳು ಇಂದು ಕಾಂಗ್ರೆಸ್ ಕಚೇರಿಯಲ್ಲಿ ಸನ್ಮಾನಿಸಿದರು.

ಹಾಲಹಳ್ಳಿ ಅಶೋಕ್ ಅವರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿದ್ದು,ಡಿ.ಸಿ.ಸಿ.ಬ್ಯಾಂಕ್, ಮಂಡ್ಯ ಸಿಟಿ ಕೋ-ಆಪರೇಟಿವ್ ಬ್ಯಾಂಕ್ ನಿರ್ದೇಶಕರಾಗಿ ಸಕ್ರಿಯವಾಗಿದ್ದು, ಜಿಲ್ಲಾ ಕಾಂಗ್ರೆಸ್ ಖಜಾಂಚಿಯಾಗಿದ್ದಾರೆ. ಮಂಡ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಲಕ್ಷ್ಮಿ ಜನಾರ್ಧನ ಶಿಕ್ಷಣ ಸಂಸ್ಥೆಯಲ್ಲಿ ಟ್ರಸ್ಟಿಯಾಗಿ ಕಳೆದ ಎರಡೂವರೆ ದಶಕಗಳಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಅವರ ಸೇವಾ ಕಾರ್ಯವನ್ನು ಪರಿಗಣಿಸಿ ರಾಜ್ಯ ಸರ್ಕಾರ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ.

ಕಳೆದ ನ.20ರಂದು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ನಡೆದ 69ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಇವರಿಗೆ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್, ಮಹಿಳಾ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ಡಿಸಿಸಿ ಬ್ಯಾಂಕ್ ಯೂನಿಯನ್ ಅಧ್ಯಕ್ಷ ಶಂಕರ್, ಕಾರ್ಯದರ್ಶಿ ಮರಿಸ್ವಾಮಿ, ಪದಾಧಿಕಾರಿಗಳಾದ ಚಂದ್ರಶೇಖರ್, ಅಶ್ವತ್ಥ್, ದೇವರಾಜು, ಕಾಂಗ್ರೆಸ್ ಮುಖಂಡರಾದ ಸಿ.ಆರ್.ರಮೇಶ್, ರಾಮಕೃಷ್ಣ, ಕೊತ್ತತ್ತಿ ರಾಜು, ಪುಟ್ಟರಾಮು, ಗುರುರಾಜು, ಕಿರಣ್, ಅಜಿತ್ ಶರ್ಮ,ವೀಣಾ ಶಂಕರ್, ಜಿಲ್ಲಾ ಮಾಧ್ಯಮ ಸಂಯೋಜಕ ಎನ್.ಕೃಷ್ಣೇಗೌಡ ಇತರರು ಅಭಿನಂದಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!