ಮಂಡ್ಯ ನಗರದ ಅಶೋಕ್ ನಗರದಲ್ಲಿರುವ ಜಿಲ್ಲಾ ಸಹಕಾರಿ ಮುದ್ರಣ ಮತ್ತು ಪ್ರಕಾಶನಾಲಯ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಬೇಲೂರು ಸೋಮಶೇಖರ್ ಅವಿರೋಧವಾಗಿ ಆಯ್ಕೆಯಾದರು.
ಸಂಘದಲ್ಲಿ 17 ಮಂದಿ ನಿರ್ದೇಶಕರಿದ್ದು, ಎಲ್ಲರ ಸಹಕಾರದೊಂದಿಗೆ ಸಂಘದ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ನಿರ್ದೇಶಕರು ಮತ್ತು ನೂತನ ಅಧ್ಯಕ್ಷ ಬೇಲೂರು ಸೋಮಶೇಖರ್ ಅವರನ್ನು ಹಿತೈಷಿಗಳು ಅಭಿನಂದಿಸಿದರು.




