Thursday, November 19, 2026

ಪ್ರಾಯೋಗಿಕ ಆವೃತ್ತಿ

ಭ್ರಷ್ಟರ ವಿರುದ್ಧ ನಿರಂತರ ಹೋರಾಟ : ರವಿಕೃಷ್ಣಾರೆಡ್ಡಿ

ಜನಸಾಮಾನ್ಯರಿಗೆ ತೊಂದರೆ ನೀಡುತ್ತಿರುವ ಅಧಿಕಾರಿಗಳು ಹಾಗೂ ನೌಕರರ ವಿರುದ್ಧ ಮಾಹಿತಿ ನೀಡಿದರೆ, ಅಂತಹವರ ವಿರುದ್ಧ ನಿರಂತರ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾರೆಡ್ಡಿ ಹೇಳಿದರು.

ಕೆ.ಆರ್.ಪೇಟೆ ಪಟ್ಟಣದ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ದೇಶದ ಅಭಿವೃದ್ಧಿಗೆ ಮಾರಕವಾಗಿರುವ ಭ್ರಷ್ಟಾಚಾರದ ನಿರ್ಮೂಲನೆಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ನಿರಂತರವಾಗಿ ಹೋರಾಟ ನಡೆಸುತ್ತಿದೆ. ಮುಂಬರುವ ತಾಲ್ಲೂಕು, ಜಿಲ್ಲಾ ಪಂಚಾಯತಿ ಹಾಗೂ 2023ರ ರಾಜ್ಯ ವಿಧಾನಸಭೆಯ ಎಲ್ಲಾ 224 ಸ್ಥಾನಗಳಿಗೂ ನಮ್ಮ ಪಕ್ಷದ ವತಿಯಿಂದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ  ಎಂದರು.

ರಾಜ್ಯದ ಸಮಗ್ರವಾದ ಅಭಿವೃದ್ಧಿಗೆ ಭ್ರಷ್ಠಾಚಾರವು ಮಾರಕವಾಗಿದೆ. ಭ್ರಷ್ಟಾಚಾರದ ನಿರ್ಮೂಲನೆಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಜನಸಾಮಾನ್ಯರಿಗೆ ಅರಿವಿನ ಜಾಗೃತಿ ಮೂಡಿಸುವ ಮೂಲಕ ಭ್ರಷ್ಟಾಚಾರದ ನಿರ್ಮೂಲನೆಗೆ ನಿರಂತರ ಹೋರಾಟ ನಡೆಸುತ್ತಿದೆ. ಹಣ, ಹೆಂಡ ಸೇರಿದಂತೆ ಯಾವುದೇ ಆಮಿಷಗಳನ್ನು ಒಡ್ಡದೇ ಪ್ರಜಾಪ್ರಭುತ್ವದ ಮೌಲ್ಯವನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಪ್ರಾಮಾಣಿಕ ಅಭ್ಯರ್ಥಿಗಳನ್ನು ಗುರುತಿಸಿ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಮೂಲಕ ಜನಸಾಮಾನ್ಯರ ಶೋಷಣೆ ಮಾಡುತ್ತಿರುವ ಬಿಜೆಪಿ, ಕಾಂಗ್ರೆಸ್ ಜೆಡಿಎಸ್ ಸೇರಿದಂತೆ ಇತರೆ ಪಕ್ಷಗಳಿಗೆ ಕೆ.ಆರ್.ಎಸ್ ಪಕ್ಷವು ಪ್ರಭಲ ಸ್ಪರ್ಧೆಯನ್ನು ನೀಡಲಿದೆ ಎಂದು ತಿಳಿಸಿದರು.

ಕೆ.ಆರ್.ಎಸ್ ಪಕ್ಷದ ತಾಲ್ಲೂಕು  ಅಧ್ಯಕ್ಷ, ವಕೀಲ ಶಂಕರೇಗೌಡ ಮಾತನಾಡಿ, ಪೋಲಿಸ್ ಠಾಣೆ, ತಾಲ್ಲೂಕು ಕಚೇರಿ, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಮಂಡ್ಯ ಜಿಲ್ಲೆಯಲ್ಲಿ ಎಲ್ಲೇ ಅನ್ಯಾಯ ನಡೆದರೆ, ನಮ್ಮ ಪಕ್ಷದ ಕಾರ್ಯಕರ್ತರು ಶ್ರೀಸಾಮಾನ್ಯರಿಗೆ ಸಹಾಯ ಮಾಡಲು, ಅನ್ಯಾಯದ ವಿರುದ್ಧ ಹೋರಾಟ ಮಾಡಲು ಸದಾ ಸಿದ್ಧರಿರುತ್ತಾರೆ. ಅವಶ್ಯಕತೆ ಬಿದ್ದಾಗ ಜನಸಾಮಾನ್ಯರು ನಮ್ಮ ಸಂಘಟನೆಯ ಸಹಾಯ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಗೋಷ್ಠಿಯಲ್ಲಿ ಮಂಡ್ಯ ಜಿಲ್ಲಾಧ್ಯಕ್ಷ ರಮೇಶಗೌಡ, ಕಾರ್ಯಾಧ್ಯಕ್ಷ ಮಹೇಂದ್ರ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಆರ್. ನಟರಾಜ್, ಕೆ.ಆರ್.ಎಸ್ ಪಕ್ಷದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸೂರ್ಯಾನಿ, ಉಪಾಧ್ಯಕ್ಷ ಮುರುಗೇಶ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಪದಾಧಿಕಾರಿಗಳು ಉಪಸ್ಥಿತರಿದ್ದರು..

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ