Thursday, September 19, 2024

ಪ್ರಾಯೋಗಿಕ ಆವೃತ್ತಿ

ದೇಶದ ಪ್ರಗತಿಗೆ ಸಹಕಾರಿ ಕ್ಷೇತ್ರದ ಬೆಳವಣಿಗೆ ಅತ್ಯಗತ್ಯ

ದೇಶದ ಪ್ರಗತಿಗೆ ಸಹಕಾರಿ ಕ್ಷೇತ್ರದ ಬೆಳವಣಿಗೆಯು ಅತ್ಯಗತ್ಯವಾಗಿದ್ದು, ಸಹಕಾರಿ ಬ್ಯಾಂಕುಗಳು ದೇಶದ ಅಭಿವೃದ್ಧಿಯಲ್ಲಿ ಕೈ ಜೋಡಿಸಿದೆ ಎಂದು ಉದ್ಯಮಿ ಕದಲೂರು ಉದಯ್ ಅನಿಸಿಕೆ ವ್ಯಕ್ತಪಡಿಸಿದರು.

ಮದ್ದೂರು ತಾಲ್ಲೂಕಿನ ಭಾರತಿನಗರದಲ್ಲಿ ನೂತನವಾಗಿ ಸ್ಥಾಪನೆಯಾಗಿರುವ ಯಶಸ್ವಿ ಪತ್ತಿನ ಸಹಕಾರ ಸಂಘದ ಕಚೇರಿಯನ್ನು ಸಮಾಜ ಸೇವಕ ಕದಲೂರು ಉದಯ್ ಉದ್ಘಾಟಿಸಿದರು.

ದೇಶದ ಪ್ರಗತಿಗೆ ಹಾಗೂ ಸಾರ್ವಜನಿಕರ ಅನುಕೂಲತೆಗೆ ಪೂರಕವಾಗಿ ಸಹಕಾರ ಸಂಘಗಳು ಬಹುಮುಖ್ಯ ಪಾತ್ರ ವಹಿಸುತ್ತದೆ. ರೈತರು,ಕೂಲಿ ಕಾರ್ಮಿಕರು, ವ್ಯಾಪಾರಸ್ಥರಿಗೆ ಸಣ್ಣ ಉದ್ಯಮಗಳನ್ನು ತೆರೆಯಲು ಸಹಕಾರಿ ಸಂಘಗಳು ಸಹಾಯಾಸ್ತವನ್ನು ನೀಡುತ್ತದೆ.ಈ ಸದುದ್ದೇಶದಿಂದ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಹೆಚ್ಚು ಸಹಕಾರಿ ಸಂಘಗಳು ಸ್ಥಾಪನೆಯಾಗಬೇಕು ಎಂದು ಆಶಯ ವ್ಯಕ್ತ ಪಡಿಸಿದರು. ಇದೇ ವೇಳೆ ನೂತನ ಆಡಳಿತ ಮಂಡಳಿಯ ಸದಸ್ಯರನ್ನು ಸನ್ಮಾನಿಸಲಾಯಿತು.

ಸಹಕಾರ ಸಂಘಗಳು ರೈತರಿಗೆ ಹಾಗೂ ಸಾರ್ವಜನಿಕರಿಗೆ ಹೆಚ್ಚು ಸಾಲ ಸೌಲಭ್ಯಗಳನ್ನು ಕಲ್ಪಿಸುತ್ತದೆ. ರೈತರು ಹಾಗೂ ಸಣ್ಣ ವ್ಯಾಪಾರಸ್ಥರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳ ಬೇಕು ಎಂದು ಲೆಕ್ಕಪರಿಶೋಧಕ ಕರಡಕೆರೆ ಮನು ಹೇಳಿದರು.

ಇದೇ ವೇಳೆ ಸಂಘದ ಅಧ್ಯಕ್ಷ ಎ.ಎಸ್.ನಟರಾಜು, ಉಪಾಧ್ಯಕ್ಷ ರಾಜಶೇಖರ್,ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗುಡಿಗೆರೆ ಪ್ರಸಾದ್ ,ಮುಖಂಡರಾದ ಸಿಪಾಯಿ ಶ್ರೀನಿವಾಸ್, ಕದಲೂರು ತಿಮ್ಮೇಗೌಡ,ಯತೀಶ್ ಕರಡಕೆರೆ ಮನು,ಅಣ್ಣೂರು ಮನೋಹರ್,ಹರೀಶ್ ಮುಂತಾದವರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!