ಅಪ್ರಾಪ್ರೆಯೊಬ್ಬರ ಮೇಲೆ 2 ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿದ ಆರೋಪದ ಮೇಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡದ ಸ್ಟಾರ್ ವೇಗಿ ಯಶ್ ದಯಾಳ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ.
2025ರ ಐಪಿಎಲ್ ಮುಕ್ತಾಯಗೊಂಡ ಕೆಲ ದಿನಗಳಿಂದ ಸ್ಟಾರ್ ವೇಗಿಗೆ ಮೇಲಿಂದ ಮೇಲೆ ಸಂಕಷ್ಟ ಎದುರಾಗುತ್ತಿದೆ. ಕೆಲ ದಿನಗಳ ಹಿಂದೆಯಷ್ಟೇ ಗಾಜಿಯಾಬಾದ್‌ನ ಯುವತಿಯೊಬ್ಬರು ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿ, ದೂರು ದಾಖಲಿಸಿದ್ದರು. ಈ ಸಂಬಂಧ ಪ್ರಕರಣ ಕೂಡ ದಾಖಲಾಗಿತ್ತು. ಇದೀಗ ಅಪ್ರಾಪ್ತ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಪೋಕ್ಸೋ ಕೇಸ್ ದಾಖಲಾಗಿದೆ.
ಬಾಲಕಿಯೊಬ್ಬಳ ಮೇಲೆ 2 ವರ್ಷಗಳಿಂದ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಜೈಪುರದ ಸಂಗನೇರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಭಾವನಾತ್ಮಕವಾಗಿ ನನ್ನನ್ನ ಕಟ್ಟಿಹಾಕಿ, ಕ್ರಿಕೆಟ್ ವೃತ್ತಿ ಜೀವನದಲ್ಲಿ ಉತ್ತಮ ಅವಕಾಶ ಕೊಡಿಸುವುದಾಗಿ ಆಮಿಷ ಒಡ್ಡಿದ್ದಾನೆ. ಆಮಿಷ ಒಡ್ಡಿ 2 ವರ್ಷಗಳ ಕಾಲ ಪದೇ ಪದೇ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.
ಕ್ರಿಕೆಟ್ ವೃತ್ತಿಜೀವನದ ಬಗ್ಗೆ ಸಲಹೆ ನೀಡುವುದಾಗಿ, ಉತ್ತಮ ಭವಿಷ್ಯ ಕಲ್ಪಿಸುವುದಾಗಿ ಹೇಳಿದ್ದ ದಯಾಳ್ ಜೈಪುರದ ಸೀತಾಪುರ ಹೋಟೇಲ್ ಗೆ ಕರೆದಿದ್ದ. ಅಲ್ಲಿ ಮೊದಲ ಬಾರಿಗೆ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ, ಪ್ರಕರಣ ನಡೆದಾಗ ನನಗೆ 17 ವರ್ಷ ವಯಸ್ಸಾಗಿತ್ತು. ಅಲ್ಲಿಂದ 2 ವರ್ಷಗಳ ಕಾಲ ಪದೇ ಪದೇ ನನ್ನ ಮೇಲೆ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾರೆ. ಈ ಹಿನ್ನೆಲೆ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಕೆಲ ದಿನಗಳ ಹಿಂದಷ್ಟೇ ಗಾಜಿಯಾಬಾದ್‌ನ ಯುವತಿಯೊಬ್ಬರು ಯಶ್ ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಗ್ಯ ದೂರು ದಾಖಲಿಸಿದ್ದರು. ಎಫ್‌ಐಆರ್ ಕೂಡ ದಾಖಲಾಗಿತ್ತು. ಈ ನಡುವೆ ಅಲಹಾಬಾದ್ ಹೈಕೋರ್ಟ್ ದಯಾಳ್ ಬಂಧನಕ್ಕೆ ತಡೆ ನೀಡಿತ್ತು. ಇದಾದ ಕೆಲ ದಿನಗಳಲ್ಲೇ ಪೋಕ್ಸೋ ಕೇಸ್ ದಾಖಲಾಗಿದೆ.




