Thursday, November 19, 2026

ಪ್ರಾಯೋಗಿಕ ಆವೃತ್ತಿ

ಕನ್ನಡದಲ್ಲಿಲ್ಲ ಸಿಆರ್‌ಪಿಎಫ್‌ ಪರೀಕ್ಷೆ : ಬಿಜೆಪಿಯಿಂದ ಕನ್ನಡಿಗರಿಗೆ ಉಂಡೆನಾಮ – ಹೆಚ್.ಡಿ.ಕುಮಾರಸ್ವಾಮಿ

ಕೇಂದ್ರದ ಬಿಜೆಪಿ ಸರಕಾರ ಮತ್ತೆ ಕನ್ನಡಿಗರಿಗೆ ಉಂಡೆನಾಮ ಹಾಕಿದೆ. ಭಾನುವಾರ ನಡೆದ ಕೇಂದ್ರೀಯ ಮೀಸಲು ಪಡೆ (ಸಿಆರ್‌ಪಿಎಫ್‌) ನೇಮಕದ ಕಂಪ್ಯೂಟರ್ ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶವನ್ನೇ ಕೊಟ್ಟಿಲ್ಲ. ಹಿಂದಿ, ಇಂಗ್ಲಿಷ್ ಭಾಷೆಯಲ್ಲಷ್ಟೇ ಪರೀಕ್ಷೆಗೆ ಅವಕಾಶ ಕೊಡಲಾಗಿದೆ. ಇದು ಖಂಡನೀಯ ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

“>

9212 ಹುದ್ದೆಗಳಿಗೆ ಈ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಕರ್ನಾಟಕದ 466 ಹುದ್ದೆಗಳೂ ಸೇರಿವೆ. ದುರಂತವೆಂದರೆ, ಇಷ್ಟು ಹುದ್ದೆಗಳನ್ನು ಬಯಸುವ ಅಭ್ಯರ್ಥಿಗಳು ಹಿಂದಿ, ಇಂಗ್ಲಿಷ್ ನಲ್ಲಿ ಪರೀಕ್ಷೆ ಬರೆದಿದ್ದಾರೆ, ಬರೆಯುವ ಅನಿವಾರ್ಯ ಸೃಷ್ಟಿಸಲಾಗಿದೆ. ಮಾತೃಭಾಷೆಯಲ್ಲಿ ಬರೆಯುವುದನ್ನು ನಿರಾಕರಿಸುವುದು ಎಂದರೆ ಸಂವಿಧಾನಕ್ಕೆ ಎಸಗಿದ ಅಪಚಾರ. ಕೇಂದ್ರ ಸರಕಾರ ತನ್ನ ಸುಪರ್ದಿಯಲ್ಲಿ ನಡೆಸುವ ಎಲ್ಲ ನೇಮಕಾತಿ ಪರೀಕ್ಷೆಗಳನ್ನು ಹಿಂದಿ, ಇಂಗ್ಲಿಷಿನಲ್ಲೇ ನಡೆಸುತ್ತಿದೆ. ಕೇವಲ ಹಿಂದಿ ಕೇಂದ್ರಿತ ನೇಮಕಾತಿ ಪ್ರಕ್ರಿಯೆ ಇತರೆ ಭಾಷಿಕರನ್ನು ಉದ್ಯೋಗ ವಂಚಿತರನ್ನಾಗಿಸುವುದು ಮಾತ್ರವಲ್ಲ, ಅನ್ಯಭಾಷೆಗಳನ್ನು ಹತ್ತಿಕ್ಕಿ ಹಿಂದಿ ಹೇರಿಕೆ ಮಾಡುವುದಷ್ಟೇ ದುರುದ್ದೇಶ. ಇದು ಸ್ಪಷ್ಟ ಎಂದು ಅವರು ಟ್ವೀಟ್ ನಲ್ಲಿ ದೂರಿದ್ದಾರೆ.

ಅಷ್ಟೇ ಅಲ್ಲ, ಈ ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳು ಹಿಂದಿ ಭಾಷೆಗೆ ಸಂಬಂಧಿಸಿದವು. ಅಲ್ಲಿಗೆ ಸ್ಪಷ್ಟ; ಹಿಂದಿಯೇತರ ಅಭ್ಯರ್ಥಿಗಳು ಈ ನೇಮಕಾತಿಯಲ್ಲಿ ಆಯ್ಕೆ ಆಗಲೇಬಾರದು ಹಾಗೂ ಉದ್ದೇಶಪೂರ್ವಕವಾಗಿಯೇ ಹೀಗೆ ಮಾಡಲಾಗಿದೆ. ಒಕ್ಕೂಟ ವ್ಯವಸ್ಥೆಗೆ ಇದು ಕೇಂದ್ರವೇ ಕೊಟ್ಟ ಮಾರಣಾಂತಿಕ ಪೆಟ್ಟು. ಮುಲಾಜಿಲ್ಲದೆ ಸಿಆರ್ ಪಿಎಫ್ ನೇಮಕಾತಿಯ ಮರು ಪರೀಕ್ಷೆ ನಡೆಸಬೇಕು ಹಾಗೂ ಕನ್ನಡ ಸೇರಿ ದೇಶದ ಎಲ್ಲ ಭಾಷೆಗಳಲ್ಲೂ ಬರೆಯಲು ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು. ಇಲ್ಲವಾದರೆ, ಈ ತಾರತಮ್ಯ ಹಾಗೂ ಹಿಂದಿ ಹೇರಿಕೆ ಇನ್ನೊಂದು ದೊಡ್ಡ ಹೋರಾಟಕ್ಕೆ ನಾಂದಿ ಆದೀತು ಎಂದು ಅವರು ಎಚ್ಚರಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ