Tuesday, November 24, 2026

ಪ್ರಾಯೋಗಿಕ ಆವೃತ್ತಿ

ಗ್ರಾಹಕರ ದಿನಾಚರಣೆ ಜ.9 ಕ್ಕೆ ಮುಂದೂಡಿಕೆ : ಹೆಚ್. ಕೃಷ್ಣ

ಡಿಸೆಂಬರ್ 24 ರಂದು ನಡೆಯಬೇಕಿದ್ದ ಆಹಾರ ಸುರಕ್ಷತಾ ಹಾಗೂ ರಾಷ್ಟೀಯ ಗ್ರಾಹಕರ ದಿನಾಚರಣೆಯನ್ನು ಕಾರಣಾಂತರದಿಂದ ಜನವರಿ 9 ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಹೆಚ್ ಕೃಷ್ಣ ತಿಳಿಸಿದರು.

ಮಂಡ್ಯದ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಸದರಿ ಕಾರ್ಯಕ್ರಮದಲ್ಲಿ ಆಹಾರದ ಮೌಲ್ಯ ಮತ್ತು ಆಹಾರದ ಮಹತ್ವದ ಕುರಿತು ಅರಿವು ಮೂಡಿಸಲಾಗುವುದು ಎಂದು ಹೇಳಿದರು.

ಜನವರಿ 9 ರಂದು ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಆಚರಿಸಲಾಗುವುದು ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ತಿಳಿಸಿದರು.

14 ಇಲಾಖೆಗಳು ಒಗ್ಗೂಡಿ ಸದರಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಆಹಾರ ಸುರಕ್ಷತೆ ಕುರಿತು ಅರಿವು ಮೂಡಿಸುವ 14 ಮಳಿಗೆಗಳನ್ನು ತೆರೆಯಲಾಗುವುದು. ಪ್ರಮುಖವಾಗಿ ವಿದ್ಯಾರ್ಥಿ ನಿಲಯಗಳಲ್ಲಿ, ಮದುವೆ, ಸಮಾರಂಭಗಳಲ್ಲಿ ಮಕ್ಕಳು ಮತ್ತು ಸಾರ್ವಜನಿಕರು ಹೆಚ್ಚಾಗಿ ಆಹಾರ ವ್ಯರ್ಥ ಮಾಡುತ್ತಾರೆ, ಈ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕಾಗಿದೆ ಎಂದು ಹೇಳಿದರು.

ಎರಡು ಸಾವಿರಕ್ಕೂ ಹೆಚ್ಚು ಜನ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಎಲ್ಲರೂ ಸೇರಿ ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸಿದಾಗ ಮಾತ್ರ ಯಶಸ್ಸು ಕಾಣಲು ಸಾಧ್ಯ ಎಂದರು.

ಇತರೆ ಜಿಲ್ಲೆಗಳಿಗೆ ಮಾದರಿಯಾಗುವಂತೆ ಮಂಡ್ಯ ಜಿಲ್ಲೆಯಲ್ಲಿ ಆಹಾರ ಜಾಗೃತಿಯನ್ನು ಮೂಡಿಸಬೇಕು. ಅಧಿಕಾರಿಗಳು ರಾಷ್ಟೀಯ ಗ್ರಾಹಕರ ದಿನಾಚರಣೆ ಹಾಗೂ ಆಹಾರ ಜಾಗೃತಿ ಕಾರ್ಯಕ್ರಮ ಯಶಸ್ವಿಗೊಳಿಸಲು ಕಾರ್ಯ ದಕ್ಷತೆಯಿಂದ ಕೆಲಸ ನಿರ್ವಹಿಸಿ ಎಂದು ಹೇಳಿದರು.

ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಆನಂದ್ ಎಂ ಅವರು ಮಾತನಾಡಿ ಜಿಲ್ಲೆಯ ನ್ಯಾಯ ಬೆಲೆ ಅಂಗಡಿ ಮಾಲೀಕರಿಗೆ ಜಾಗೃತಿ ಕಾರ್ಯಾಗಾರ ಮಾಡಿ. ಕಡ್ಡಾಯವಾಗಿ ಎಲ್ಲಾ ನ್ಯಾಯಬೆಲೆ ಅಂಗಡಿಯ ಮಾಲೀಕರು
ಕಾರ್ಯಕ್ರಮದಲ್ಲಿ ಹಾಜರಿರಬೇಕು ಎಂದು ಹೇಳಿದರು.

ಸಭೆಯಲ್ಲಿ ರಾಜ್ಯ ಆಹಾರ ಆಯೋಗದ ಕಾನೂನು ಸಲಹೆಗಾರರಾದ ಕುಮಾರ ಸ್ವಾಮಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಪ್ರತೀಕ್ ಹೆಗ್ಡೆ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಕೋಮಲ್ ಕುಮಾರ್ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾಧಿಕಾರಿ ಮಂಜುಳಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ