Saturday, May 18, 2024

ಪ್ರಾಯೋಗಿಕ ಆವೃತ್ತಿ

ರಾಜ್ಯದಾದ್ಯಂತ 5 ದಿನ ಮಳೆ | ಮಂಡ್ಯದಲ್ಲೂ ಧಾರಾಕಾರ ಮಳೆಯಾಗುವ ಸಾಧ್ಯತೆ

ರಾಜ್ಯಾದ್ಯಂತ ಇನ್ನೂ 5 ದಿನಗಳ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು ಈ ಪ್ರದೇಶದ ಒಳನಾಡು ಜಿಲ್ಲೆಯಲ್ಲಿ ಮಳೆಯಾಗುವ ಲಕ್ಷಣಗಳಿವೆ.

ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಮೈಸೂರು, ಕೊಡಗು, ಚಾಮರಾಜನಗರ, ರಾಮನಗರ, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರದಲ್ಲಿ ಮಳೆ ಸಂಭವ ಇದೆ. ಬೆಂಗಳೂರು ನಗರದಲ್ಲಿ 4 ದಿನಗಳ ಕಾಲ ಭಾರಿ ಮಳೆ ಸಾಧ್ಯತೆ ಇದೆ.

ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಉಂಟಾದ ಪರಿಣಾಮ ನಾಳೆ (ಮೇ 10ರಂದು) ಚಂಡಮಾರುತ ಉಂಟಾಗುವ ಸಾಧ್ಯತೆ ಇದ್ದು, ಇದರ ಪ್ರಭಾವದಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಮಳೆಯಾಗಲಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!