Monday, November 23, 2026

ಪ್ರಾಯೋಗಿಕ ಆವೃತ್ತಿ

ಡಿ.2-3 : ವಿ.ಸಿ.ಫಾರಂನಲ್ಲಿ ಕೃಷಿಮೇಳ – ಕೃಷಿ ವಸ್ತು ಪ್ರದರ್ಶನ

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ, ವಲಯ ಮಹಾವಿದ್ಯಾಲಯ ಮತ್ತು ಕೃಷಿ ಸಂಶೋಧನಾ ಕೇಂದ್ರ, ಕೃಷಿ ಮಹಾವಿದ್ಯಾಲಯ ಮತ್ತು ಕೃಷಿ ವಿಜ್ಞಾನ ಕೇಂದ್ರ ವಿ.ಸಿ.ಫಾರಂ ಇವರ ವತಿಯಿಂದ ಡಿಸೆಂಬರ್ 2 ಮತ್ತು 3ರಂದು ಮಂಡ್ಯ ತಾಲ್ಲೂಕಿನ ವಿ.ಸಿ.ಫಾರಂನಲ್ಲಿ ಕೃಷಿಮೇಳವನ್ನು ಆಯೋಜಿಸಲಾಗಿದೆ ಎಂದು ಸಹ ಸಂಶೋಧನಾ ನಿರ್ದೇಶಕ ಡಾ.ಎನ್.ಶಿವಕುಮಾರ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.2ರಂದು ಬೆಳಿಗ್ಗೆ 10 ಗಂಟೆಗೆ ಅಬಕಾರಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ಕೃಷಿ ಮೇಳದ ಉದ್ಘಾಟನೆಯನ್ನು ಉದ್ಘಾಟಿಸು ವರು. ರೇಷ್ಮೆ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ಕೆ.ಸಿ.ನಾರಾಯಣಗೌಡ ಅವರು ಕೃಷಿ ವಸ್ತು ಪ್ರದರ್ಶನದ ಉದ್ಘಾಟನೆ ನೆರವೇರಿಸುವರು. ಕೃಷಿ ಸಚಿವ ಬಿ.ಸಿ.ಪಾಟೀಲ್ ಕೃಷಿ ಪ್ರಾತ್ಯಕ್ಷಿಕಾ ತಾಕುಗಳ ಉದ್ಘಾಟನೆ ನೆರವೇರಿಸುವರು. ಶಾಸಕ ಸಿ.ಎಸ್‌. ಪುಟ್ಟರಾಜು ಅಧ್ಯಕ್ಷತೆ ವಹಿಸುವರು ಎಂದರು.

ಮುಖ್ಯ ಅತಿಥಿಗಳಾಗಿ ಸಂಸದೆ ಸುಮಲತಾ ಅಂಬರೀಶ್, ಶಾಸಕರಾದ ಎಂ. ಶ್ರೀನಿವಾಸ್, ಡಿ.ಸಿ. ತಮ್ಮಣ್ಣ, ಸುರೇಶ್ ಗೌಡ, ಡಾ.ಕೆ.ಅನ್ನದಾನಿ, ರವೀಂದ್ರ ಶ್ರೀಕಂಠಯ್ಯ, ಮಧು ಜಿ. ಮಾದೇಗೌಡ, ದಿನೇಶ್ ಗೂಳೀಗೌಡ, ಮರಿತಿಬ್ಬೇಗೌಡ, ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಬೆಂಗಳೂರು ದಕ್ಷಿಣ ಹಾಗೂ ವ್ಯವಸ್ಥಾಪನಾ ಮಂಡಳಿ ಸದಸ್ಯ ಎಂ.ಕೃಷ್ಣಪ್ಪ, ಗಾಣದಾಳು ಗ್ರಾ.ಪಂ.ಅಧ್ಯಕ್ಷೆ ಜಿ.ಕೆ.ರೂಪಾರಾಣಿ ಭಾಗವಹಿಸುವರು ಎಂದರು

ಗೌರವ ಅತಿಥಿಗಳಾಗಿ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಕುಲಪತಿ ಡಾ.ಎಸ್‌.ಎ.ಸುರೇಶ್, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎನ್.ಎಸ್ ಪ್ರಸಾದ್, ಕೃಷಿ ಇಲಾಖೆ ಕಾರ್ಯದರ್ಶಿ ಶಿವಮೋಗಿ ಸಿ.ಕಳಸದ್, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ, ಕೃಷಿ ವಿ.ವಿ ವ್ಯವಸ್ಥಾಪನಾ ಮಂಡಳಿ ಸದಸ್ಯರಾದ ಟಿ.ಎಂ.ಅರವಿಂದ್, ಸುರೇಶ್ ಮಾರ್ಗದ್, ಡಾ.ಪಿ.ಹೆಚ್.ರಾಮಾ ಜಿಂನಿಗೌಡ, ಓ.ಎಸ್.ದಯಾನಂದ, ಆರ್.ಶ್ರೀರಾಮ, ಕೃಷಿ ವಿವಿ ಕುಲಸಚಿವ ಡಾ.ಬಸವೇಗೌಡ, ವಿಸ್ತರಣಾ ನಿರ್ದೇಶಕ ಡಾ.ಕೆ.ನಾರಾಯಣಗೌಡ ಭಾಗವಹಿಸುವರು ಎಂದು ವಿವರಿಸಿದರು.

ವಿಶೇಷ ಆಹ್ವಾನಿತರಾಗಿ ಜಿಲ್ಲಾ ಉಸ್ತುವಾರಿ ಸಚಿವ ಜಯರಾಂ ರಾಯಪುರ, ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲ ಕೃಷ್ಣ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎನ್.ಯತೀಶ್, ಜಿ.ಪಂ.ಸಿಇಓ ಶಾಂತ ಎಲ್.ಹುಲ್ಮನಿ ಭಾಗವಹಿಸುವರು ಎಂದರು.

ಗೋಷ್ಠಿಯಲ್ಲಿ ಸಹ ವಿಸ್ತರಣಾ ನಿರ್ದೇಶಕ ಡಾ.ಡಿ.ರಘುಪತಿ, ಕೃಷಿ ಮಹಾವಿದ್ಯಾಲಯದ ಡೀನ್(ಕೃಷಿ) ಡಾ.ಎಸ್.ಎಸ್.ಪ್ರಕಾಶ್, ಜಿಲ್ಲಾ ವಾರ್ತಾಧಿಕಾರಿ ನಿರ್ಮಲಾ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ