Thursday, November 19, 2026

ಪ್ರಾಯೋಗಿಕ ಆವೃತ್ತಿ

ರಸ್ತೆ ಅಭಿವೃದ್ದಿ ಕಾಮಗಾರಿಗೆ ಶಾಸಕ ಡಿ.ಸಿ.ತಮ್ಮಣ್ಣ ಗುದ್ದಲಿಪೂಜೆ

ಮದ್ದೂರು ತಾಲ್ಲೂಕು ಸುಣ್ಣದದೊಡ್ಡಿ ಗ್ರಾಮದಲ್ಲಿ 1.50 ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿಗೆ ಶಾಸಕ ಡಿ.ಸಿ.ತಮ್ಮಣ್ಣ ಗುದ್ದಲಿ ಪೂಜೆ ನೆರವೇರಿಸಿದರು.

ಇದೇ ವೇಳೆ ಶಾಸಕ ಡಿ.ಸಿ.ತಮ್ಮಣ್ಣ ಮಾತನಾಡಿ, ಗ್ರಾಮೀಣ ಪ್ರದೇಶದ ಅಭಿವೃದ್ದಿಗಾಗಿ ಗ್ರಾಮದ ಎಲ್ಲಾ ರಸ್ತೆಗಳನ್ನು ಅಭಿವೃದ್ದಿ ಪಡಿಸಲು ಕ್ರಮಕೈಗೊಂಡಿದ್ದೇನೆ. ಹಾಗಾಗಿ ಸುಣ್ಣದದೊಡ್ಡಿ ಗ್ರಾಮದ ರಸ್ತೆ ಅಭಿವೃದ್ದಿಗೆ 75 ಲಕ್ಷ, ಕಾಲೋನಿ ರಸ್ತೆ ಅಭಿವೃದ್ದಿಗೆ 75 ಲಕ್ಷ ರೂ ಸೇರಿ 1.50 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ದಿ ಪಡಿಸಲು ಕ್ರಮಕೈಗೊಂಡಿದ್ದೇನೆ ಎಂದರು.

ಕ್ಷೇತ್ರದಲ್ಲಿ ಅಭಿವೃದ್ದಿಗಾಗಿ ನೂರಾರು ಕೋಟಿರೂಗಳ ಅನುದಾನವನ್ನು ತಂದು ಪಕ್ಷಾತೀತವಾಗಿ ಕೆಲಸ ನಿರ್ವಹಿಸಿದ್ದೇನೆ. ಮತ್ತಷ್ಟು ಕೆಲಸ ಮಾಡಲು ಜೆಡಿಎಸ್ ಪಕ್ಷವನ್ನು ಬೆಂಬಲಿಸಿ, ರಾಜ್ಯದಲ್ಲಿ ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಡವರ್ಗದ ಜನರಿಗೆ ಸಾಕಷ್ಟು ಅನುಕೂಲ ಸಿಗಲಿದೆ ಎಂದರು.

ಹೆಚ್.ಡಿ.ಕುಮಾರಸ್ವಾಮಿ ಅವರು ಪಂಚರತ್ನ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಈ ಯೋಜನೆ ಯಶಸ್ವಿಗೊಳ್ಳಬೇಕಾದರೆ ಜೆಡಿಎಸ್ ಪಕ್ಷಕ್ಕೆ ಮತ ನೀಡಿ ಎಂದು ಕೋರಿದರು.

ಇದೇ ವೇಳೆ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಚಿಕ್ಕತಿಮ್ಮೇಗೌಡ, ಬೊಪ್ಪಸಮುದ್ರದ ಪುಟ್ಟಸ್ವಾಮಿ, ಗ್ರಾ.ಪಂ ಸದಸ್ಯ ಶಿವಲಿಂಗೇಗೌಡ, ಮುಖಂಡರಾದ ರಾಜಣ್ಣ, ರಘುಸ್ವಾಮಿ, ಸಿದ್ದೇಗೌಡ ಸೇರಿದಂತೆ ಹಲವರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ