Sunday, May 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಆ.20ರಂದು ಡಿ.ದೇವರಾಜ ಅರಸು ಜನ್ಮದಿನ ಆಚರಣೆ

ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್ 20ರ ಬೆಳಿಗ್ಗೆ 11 ಗಂಟೆಗೆ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಸಾಮಾಜಿಕ ಪರಿವರ್ತನೆಯ ಹರಿಕಾರ, ಕರ್ನಾಟಕ ರಾಜ್ಯದ ಮಾಜಿ ಮುಖ್ಯಮುಂತ್ರಿ ಡಿ.ದೇವರಾಜ ಅರಸು ಅವರ 108ನೇ ಜನ್ಮದಿನಾಚರಣೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ಜಾಹೀರಾತು

ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ಎಸ್ ತಂಗಡಗಿ ಭಾಗವಹಿಸುವರು. ಶಾಸಕ ಪಿ.ರವಿಕುಮಾರ್ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಂಸದೆ ಸುಮಲತಾ ಅಂಬರೀಶ್, ವಿಧಾನ ಪರಿಷತ್ ಶಾಸಕರಾದ ಮರಿತಿಬ್ಬೇಗೌಡ, ಮಧು ಜಿ ಮಾದೇಗೌಡ, ದಿನೇಶ್ ಗೂಳಿಗೌಡ, ವಿಧಾನಸಭೆ ಶಾಸಕರಾದ ಎ.ಬಿ ರಮೇಶ್ ಬಂಡಿಸಿದ್ದೇಗೌಡ, ಪಿ.ಎಂ ನರೇಂದ್ರಸ್ವಾಮಿ, ದರ್ಶನ್ ಪುಟ್ಟಣ್ಣಯ್ಯ, ಹೆಚ್.ಟಿ ಮಂಜು, ಕೆ.ಎಂ ಉದಯ್  ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ.ಪಿ.ಸಿ ಜಾಫರ್ ಸೇರಿದಂತೆ ಇನ್ನಿತರ ಗಣ್ಯರು ಭಾಗವಹಿಸುವರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!