ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ ಜನ್ಮದಿನಾಚರಣೆಯನ್ನು ಜಿಲ್ಲಾಡಳಿತದ ವತಿಯಿಂದ ಆಗಸ್ಟ್ 20 ರಂದು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಡಿ.ದೇವರಾಜ ಅರಸುರವರ ಜನ್ಮದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಆಗಸ್ಟ್ 20 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದವರೆಗೂ ಮೆರವಣಿಗೆ ನಡೆಸಲಾಗುವುದು ಎಂದು ಹೇಳಿದರು.
ಡಿ.ದೇವರಾಜ ಅರಸ್ ರವರ ಜನ್ಮ ದಿನಾಚರಣೆ ಅಂಗವಾಗಿ ಡಿ ದೇವರಾಜ್ ಅರಸುರವರ ಅಪರೂಪದ ಭಾವಚಿತ್ರಗಳನ್ನು ಪ್ರದರ್ಶನ ಮಾಡಲಾಗುವುದು ಜೊತೆಗೆ ಅವರ ಪುಸ್ತಕಗಳನ್ನು ಸಹ ಪ್ರದರ್ಶನ ಮಾಡಲಾಗುವುದು ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಹೇಳಿದರು.
ಡಿ ದೇವರಾಜ ಅರಸುರವರ ಜನ್ಮದಿನಾಚರಣೆಯನ್ನು ತಾಲೂಕು ಮಟ್ಟಗಳಲ್ಲಿ ಆಚರಿಸಲು ನಿರ್ಧರಿಸಲಾಗಿದೆ, ತಾಲೂಕು ಮಟ್ಟದ ಅಧಿಕಾರಿಗಳು ಡಿ.ದೇವರಾಜ ಅರಸು ರವರ ಜನ್ಮದಿನಾಚರಣೆಯನ್ನು ಆಚರಿಸತಕ್ಕದ್ದು ಎಂದು ಸೂಚಿಸಿದರು.
ಡಿ.ದೇವರಾಜು ಅರಸುರವರ ಕುರಿತು ಪ್ರಬಂಧ ಸ್ಪರ್ಧೆ ಆಯೋಜಿಸಿ, ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ವೇದಿಕೆ ಕಾರ್ಯಕ್ರಮದಲ್ಲಿ ಬಹುಮಾನ ನೀಡಲಾಗುವುದು. ಜಿಲ್ಲೆಯಲ್ಲಿ ಎಸ್‌ಎಸ್ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಲಯಗಳನ್ನು ಗುರುತಿಸಿ ವಾರ್ಡನ್ ಗಳನ್ನು ಸನ್ಮಾನಿಸಿ ಎಂದರು.
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ನಿಲಯದಲ್ಲಿ ವ್ಯಾಸಂಗ ಮಾಡಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ನಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಆರ್ ನಂದಿನಿ, ಅಪರ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರ್ ಸ್ವಾಮಿ, ಡಿ.ವೈ.ಎಸ್.ಪಿ. ಲಕ್ಷ್ಮಿ ಕಾಂತ್ ಪ್ರಸಾದ್, ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಧನುಷ್, ಮಂಡ್ಯ ತಹಶೀಲ್ದಾರ್ ವಿಶ್ವನಾಥ್, ನಗರಸಭೆ ಪೌರಾಯುಕ್ತೆ ಪಂಪಶ್ರೀ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಂಜುಳಾ, ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.




