ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ದ್ವಿತೀಯ ಡಿಇ.ಎಲ್.ಇಡಿ (Diploma in Elementary Education) ಮುಖ್ಯ ಪರೀಕ್ಷೆಯು ಮಂಡ್ಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ನಲ್ಲಿ ಜುಲೈ 16 ರಿಂದ 20 ರವರೆಗೆ ನಡೆಯಲಿದೆ.
ದ್ವಿತೀಯ ಡಿ.ಇಎಲ್.ಇಡಿ ಮುಖ್ಯ ಪರೀಕ್ಷೆಯು ಸುಗಮವಾಗಿ ನಡೆಯಲು ಮಂಡ್ಯ ಪರೀಕ್ಷಾ ಕೇಂದ್ರವಾದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್)ಯ ಸುತ್ತಮುತ್ತ ಪರೀಕ್ಷಾ ದಿನಗಳಂದು 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಸೈಬರ್ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾರ್ಥಿಗಳು ಮತ್ತು ಪರೀಕ್ಷಾ ಕಾರ್ಯಕ್ಕೆ ನೇಮಕಗೊಂಡ ಅಧಿಕಾರಿಗಳು/ಸಿಬ್ಬಂದಿಗಳು ಹೊರತುಪಡಿಸಿ ಇತರರು ಯಾರೂ ನಿಷೇಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.




