ಸದನದಲ್ಲಿ ಹುಲಿ, ಹೈಕಮಾಂಡ್ ಮುಂದೆ ಇಲಿಯಂತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಚ್ಛಾಟನೆಗೆ ಹೆದರಿ ಕ್ಷಮೆಯಾಚಿಸಿದ್ದಾರೆಂದು ಜೆಡಿಎಸ್ ಪಕ್ಷ ಟೀಕಿಸಿದೆ.
ವಿಧಾನಸಭೆಯಲ್ಲಿ ಆರೆಸ್ಸೆಸ್ ಗೀತೆ ಹಾಡಿ ಇಟಲಿ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ರಣಹೇಡಿ ಡಿಕೆಶಿ ಅಧಿಕಾರ ಉಳಿಸಿಕೊಳ್ಳಲು, ಉಚ್ಛಾಟನೆಯಿಂದ ಪಾರಾಗಲು ಮಂಡಿಯೂರಿ ಕ್ಷಮೆಯಾಚಿಸಿದ್ದಾರೆ ಎಂದು ಜೆಡಿಎಸ್ ಎಕ್ಸ್ ನಲ್ಲಿ ಬರೆದುಕೊಂಡಿದೆ.
ಉಚ್ಛಾಟನೆಗೆ ಹೆದರಿ ಕ್ಷಮೆಯಾಚಿಸಿದ ಉಪಮುಖ್ಯಮಂತ್ರಿ @DKShivakumar
ಸದನದಲ್ಲಿ ಹುಲಿ, ಹೈಕಮಾಂಡ್ ಮುಂದೆ ಇಲಿ.
ವಿಧಾನಸಭೆಯಲ್ಲಿ #RSS ಗೀತೆ ಹಾಡಿ ಇಟಲಿ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ರಣಹೇಡಿ ಡಿಕೆಶಿ ಅಧಿಕಾರ ಉಳಿಸಿಕೊಳ್ಳಲು, ಉಚ್ಛಾಟನೆಯಿಂದ ಪಾರಾಗಲು ಮಂಡಿಯೂರಿ ಕ್ಷಮೆಯಾಚಿಸಿದ್ದಾರೆ.
ನಾಯಕ ಸಮುದಾಯದ ಸಚಿವರನ್ನು… pic.twitter.com/7DjnshcWc4
— Janata Dal Secular (@JanataDal_S) August 26, 2025
“>
ನಾಯಕ ಸಮುದಾಯದ ಸಚಿವರನ್ನು ಏಕಾಏಕಿ ಮಂತ್ರಿಸ್ಥಾನದಿಂದ ವಜಾಗೊಳಿಸಲಾಗಿತ್ತು. ಅವರಿಗೆ ಕ್ಷಮೆಕೇಳುವ ಒಂದು ಅವಕಾಶವನ್ನು ಸಹ ಹೈಕಮಾಂಡ್ ನೀಡಿರಲಿಲ್ಲ. ಕಾಂಗ್ರೆಸ್ ಹೈಕಮಾಂಡ್‌ನಲ್ಲಿ ದಲಿತರಿಗೊಂದು ನ್ಯಾಯ, ಬಲಾಢ್ಯರಿಗೊಂದು ನ್ಯಾಯ ಎಂಬ ಸಿದ್ದಾಂತವಿದೆ ಎಂದು ಜೆಡಿಎಸ್ ಬೊಟ್ಟು ಮಾಡಿದೆ.




