Thursday, November 19, 2026

ಪ್ರಾಯೋಗಿಕ ಆವೃತ್ತಿ

ಡಿ.ಕೆ.ಶಿವಕುಮಾರ್ ಗೆ ಮತ್ತೆ ಇಡಿ ಸಂಕಷ್ಟ

ರಾಜ್ಯದಲ್ಲಿ ವಿಧಾನಸಭೆ ಚಳಿಗಾಲದ ಅಧಿವೇಶನ ನಡೆಯುತ್ತಿರುವಾಗಲೇ ತಮಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ನೀಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು  ಗುರುವಾರ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ಮತ್ತು ಅಸೆಂಬ್ಲಿ ಅಧಿವೇಶನದ ಮಧ್ಯೆ, ಅವರು(ಇಡಿ) ಮತ್ತೆ ನನಗೆ ಹಾಜರಾಗಲು  ಸಮನ್ಸ್ ನೀಡಿದ್ದಾರೆ” ಎಂದು ಶಿವಕುಮಾರ್ ಟ್ವಿಟರ್‌ನಲ್ಲಿ ಹೇಳಿಕೊಂಡಿದ್ದಾರೆ.

“ನಾನು ಇಡಿಗೆ ಸಹಕರಿಸಲು ಸಿದ್ಧನಿದ್ದೇನೆ, ಆದರೆ , ಈ ಸಮಯದಲ್ಲಿ ನನಗೆ ಸಮನ್ಸ್‌ ನೀಡಿರುವುದು, ನನಗೆ ಕಿರುಕುಳ ನೀಡುವ ಉದ್ದೇಶದಿಂದಲೇ ಕೂಡಿದೆ, ಈ ಕ್ರಮವು ನನ್ನ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ಅಡ್ಡಿ ಮಾಡುತ್ತಿದೆ ಎಂದು ಅವರು ಹೇಳಿದರು.

ಕೆಲವು ದಿನಗಳ ಹಿಂದೆ ರಾಜ್ಯ ಕಾಂಗ್ರೆಸ್ ಪಕ್ಷವು, ಭಾರತೀಯ ಜನತಾ ಪಕ್ಷದ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ “ಶೇ. 40 ಸರ್ಕಾರ, ಬಿಜೆಪಿ ಎಂದರೆ ಭ್ರಷ್ಟಾಚಾರ” ಎಂಬ ಬ್ಯಾನರ್ ಅಡಿಯಲ್ಲಿ ಪ್ರತಿಭಟನೆಯನ್ನು ಪ್ರಾರಂಭಿಸಿದ್ದನ್ನು ಗಮನಿಸಬಹುದು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ