ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ರವರ ಅಂತಿಮ ಸಂಸ್ಕಾರವು ಮದ್ದೂರು ತಾಲ್ಲೂಕಿನ ಬೆಂಗಳೂರು-ಮೈಸೂರು ಹೆದ್ದಾರಿಯ ಪಕ್ಕದ ಸೋಮನಹಳ್ಳಿ ಕಾಫಿ ಡೇ” ಹತ್ತಿದ ಖಾಲಿ ಜಾಗದಲ್ಲಿ ನೆರವೇರಲಿದೆ.
ಇದರ ಸಿದ್ದತೆಗಾಗಿ ಸ್ವತಃ ಉಪಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಸೋಮನಹಳ್ಳಿಗೆ ಇಂದು ಆಗಮಿಸಿ ಸ್ಥಳದ ಪರಿಶೀಲನೆ ನಡೆಸಿದರು. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.
ಎಸ್.ಎಂ.ಕೃಷ್ಣ ನಿಧನದ ಹಿನ್ನೆಲೆಯಲ್ಲಿ ಸರ್ಕಾರವು ನಾಳೆ (ಡಿ.11) ಸರ್ಕಾರಿ ರಜೆ ಘೋಷಣೆ ಮಾಡಿದ್ದು, 3 ದಿನ ಶೋಕಾಚರಣೆಯನ್ನು ಘೋಷಿಸಿದೆ.
ಇದೇ ಸಂದರ್ಭದಲ್ಲಿ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ಉದಯ್, ಜಿಲ್ಲಾಧಿಕಾರಿ ಡಾ: ಕುಮಾರ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.




