ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು 2023 ಕ್ಕೆ ಈ ನಾಡಿನ ಮುಖ್ಯಮಂತ್ರಿಯಾಗುವ ಮೂಲಕ ಬಡವರು,ದೀನದಲಿತರು, ಹಾಗೂ ಎಲ್ಲಾ ವರ್ಗದ ಜನರ ಧ್ವನಿಯಾಗಿ ಕೆಲಸ ಮಾಡಲಿ ಎಂದು ಕಾಂಗ್ರೆಸ್ ಮುಖಂಡ ಸಿದ್ಧಾರೂಢ ಎಂ.ಜೆ.(ಸತೀಶ್ ಗೌಡ) ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲಾ ಆಸ್ಪತ್ರೆಯ ಹೆರಿಗೆ ಹಾಗೂ ಪ್ರಸೂತಿ ಕೇಂದ್ರದ ಆವರಣದಲ್ಲಿ ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಸಿದ್ಧಾರೂಡ ಸತೀಶ್ ಗೌಡ ಅವರ ನೇತೃತ್ವದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ 61 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಮಮತೆಯ ಮಡಿಲು ನಿತ್ಯ ಅನ್ನ ದಾಸೋಹ ಕೇಂದ್ರದಲ್ಲಿ ರೋಗಿಗಳು ಮತ್ತು ಅವರ ಸಂಬಂಧಿಕರಿಗೆ ಬೆಳಗಿನ ಉಪಹಾರ,ಮಧ್ಯಾಹ್ನದ ಊಟ ಹಾಗೂ ಹಣ್ಣುಹಂಪಲು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು,ಡಿ.ಕೆ.ಶಿವಕುಮಾರ್ ಅವರಿಗೆ ಸರ್ವಧರ್ಮದ ಆಶೀರ್ವಾದ ಸಿಗಲಿ.ಈ ನಾಡಿನ ಮುಖ್ಯಮಂತ್ರಿ ಆಗಲಿ ಎಂದು ಆಶಿಸಿದರು.
ಡಿ.ಕೆ. ಶಿವಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ನಾಡಿನಾದ್ಯಂತ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿ ಕೊಳ್ಳುವ ಮೂಲಕ ಸೇವೆ ಸಲ್ಲಿಸಲಾಗುತ್ತಿದೆ ಎಂದು ತಿಳಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಕ್ತದಾನ ಶಿಬಿರ, ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ.
ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಲಿ ಎಂದು ಕಾಲಭೈರವೇಶ್ವರನಲ್ಲಿ ಪ್ರಾರ್ಥನೆ ಸಲ್ಲಿಸುತ್ತಾ , ಜಿಲ್ಲೆಯ ಜನತೆಯ ಪರವಾಗಿ ಹಾಗೂ ಕಾಂಗ್ರೆಸ್ ಪಕ್ಷದ ಪರವಾಗಿ ಹುಟ್ಟು ಹಬ್ಬದ ಶುಭಾಶಯ ಕೋರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಪಿ.ಎನ್. ಸಿದ್ದೇಗೌಡ, ಕಿರಣ್ ಕುಮಾರ್, ದೊರೆರಾಜು, ಪಳಿನಿ, ಅನಿಲ್ ಕುಮಾರ್, ಯೋಗ ಸೇರಿದಂತೆ ಇತರರು ಹಾಜರಿದ್ದರು.