Wednesday, September 11, 2024

ಪ್ರಾಯೋಗಿಕ ಆವೃತ್ತಿ

ಡಿ.ಕೆ .ಶಿವಕುಮಾರ್ ಹುಟ್ಟುಹಬ್ಬ ಆಚರಿಸಿದ ದಿನೇಶ್ ಗೂಳಿಗೌಡ

ಮಳವಳ್ಳಿ ಪಟ್ಟಣದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಜನ್ಮದಿನ ಆಚರಣೆಯನ್ನು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳೀಗೌಡ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಸೇರಿ ಕೇಕ್ ಕತ್ತರಿಸುವ ಮೂಲಕ ಆಚರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಮ್ಮೆಲ್ಲರ ನೆಚ್ಚಿನ ನಾಯಕ ಡಿ ಕೆ.ಶಿವಕುಮಾರಗ ಅವರು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಅನೇಕ ಹೊಸತನಕ್ಕೆ ಸಾಕ್ಷಿಯಾಗಿದ್ದಾರೆ.ಜನರ ಪರವಾಗಿ, ಧ್ವನಿಯಾಗಿ ನಿಂತಿದ್ದಾರೆ ಎಂದರು.

ಯಾರು ಕ್ರಿಯಾಶೀಲವಾಗಿ, ಶಕ್ತಿಯುತವಾಗಿ ಕೆಲಸಗಳನ್ನು ಮಾಡುತ್ತಿರುತ್ತಾರೋ ಅಂಥವರಿಗೆ ವಿರೋಧಿಗಳು ಹೆಚ್ಚು. ಜೊತೆಗೆ ಅಸೂಹೆ ಪಡುವವರು ಸಹ ಹೆಚ್ಚಿರುತ್ತಾರೆ. ಯಾರು ಕೆಲಸವನ್ನೇ ಮಾಡುವುದಿಲ್ಲವೋ ಅಂಥವರಿಗೆ ವಿರೋಧಿಗಳು ಸಹ ಇರೋದಿಲ್ಲ ಎಂದು ಹೇಳುವ ಶಿವಕುಮಾರ್ ಅವರ ಮಾತು ಅಕ್ಷರಶಃ ಸತ್ಯ. ಎಷ್ಟೇ ವಿರೋಧಿಗಳಿದ್ದರೂ, ವಿರೋಧವಿದ್ದರೂ ಅದನ್ನು ಮೆಟ್ಟಿ ನಿಲ್ಲುವ ಶಕ್ತಿ ಅವರಿಗಿದೆ ಎಂದು ಹೇಳಿದರು.

ಡಿ.ಕೆ ಶಿವಕುಮಾರ್ ಅವರು ಕೆಪಿಸಿಸಿ ಸಾರಥ್ಯ ವಹಿಸಿಕೊಂಡ ಮೇಲೆ ಪಕ್ಷದ ಚಟುವಟಿಕೆಗೆ ಡಿಜಿಟಲ್ ಸ್ಪರ್ಶವನ್ನು ನೀಡಿದ್ದಲ್ಲದೆ, ತಳಮಟ್ಟದ ಕಾರ್ಯಕರ್ತರಿಂದ ಹಿಡಿದು ನಾಯಕರವರೆಗೂ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಪಕ್ಷವನ್ನು ಮುನ್ನಡೆಸುತ್ತಿದ್ದಾರೆ.

ಇದೀಗ ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲಿ ಕರ್ನಾಟಕದಲ್ಲಿ ಪ್ರಪ್ರಥಮ ಬಾರಿಗೆ 78 ಲಕ್ಷ ಕಾಂಗ್ರೆಸ್ ಸದಸ್ಯತ್ವವನ್ನು ಮಾಡಿಸಿ ಇತಿಹಾಸವನ್ನು ಸೃಷ್ಟಿಸಿದ್ದಾರೆ. ಈ ಮೂಲಕ ಕರ್ನಾಟಕವು ಭಾರತದಲ್ಲೇ ಅತಿ ಹೆಚ್ಚು ಕಾಂಗ್ರೆಸ್ ಸದಸ್ಯತ್ವವನ್ನು ಪಡೆದ ರಾಜ್ಯವಾಗಿ ಹೊರಹೊಮ್ಮಿದೆ.

ಇದು ಮುಂದಿನ ದಿನದಲ್ಲಿ ಕಾಣುವ ಯಶಸ್ಸಿಗೆ ಮೈಲುಗಲ್ಲಾಗಿದೆ. ಭಗವಂತ ಇವರಿಗೆ ಆಯುರಾರೋಗ್ಯವನ್ನು ಕರುಣಿಸಲಿ, ಇವರ ನೇತೃತ್ವದಲ್ಲಿ ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.

ಮಳವಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೇವರಾಜ್, ಮುಖಂಡರಾದ ಬಸಪ್ಪ ಮತ್ತು ಪದಾಧಿಕಾರಿಗಳು, ಕಾರ್ಯಕರ್ತರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!