Saturday, November 21, 2026

ಪ್ರಾಯೋಗಿಕ ಆವೃತ್ತಿ

ವಿಧಾನ ಪರಿಷತ್ ಗೆ ದಡದಪುರ ಶಿವಣ್ಣ ನೇಮಿಸಲು ಒತ್ತಾಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತ, ಡಾ.ರಾಮ ಮನೋಹರ ಲೋಹಿಯಾ ವಿಚಾರ ವೇದಿಕೆ ಅಧ್ಯಕ್ಷ ಮಳವಳ್ಳಿ ತಾಲ್ಲೂಕಿನ ದಡದಪುರ ಶಿವಣ್ಣ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡುವಂತೆ ಮುಖ್ಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಮುಖಂಡ ಶಿವನಂಜು ಒತ್ತಾಯಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಲೋಹಿಯಾ ವಿಚಾರ ವೇದಿಕೆ ಅಧ್ಯಕ್ಷರಾದ ಮಳವಳ್ಳಿ ಶಿವಣ್ಣನವರ ಹುಟ್ಟುಹಬ್ಬದ ಅಂಗವಾಗಿ ಮಂಡ್ಯ ನಗರದ ಮಿಮ್ಸ್ ಆವರಣದಲ್ಲಿರುವ ಮಮತೆಯ ಮಡಿಲು ನಿತ್ಯ ಅನ್ನ ದಾಸೋಹ ಕೇಂದ್ರದಲ್ಲಿ ರೋಗಿಗಳು ಮತ್ತು ಅವರ ಸಂಬಂಧಿಕರಿಗೆ ಆಹಾರ ವಿತರಣೆ ಮಾಡಿ ಅವರು ಮಾತನಾಡಿದರು.
ಶಿವಣ್ಣ ಅವರು ಮುಖ್ಯಮಂತ್ರಿಗಳ ಪರಮಾಪ್ತರಾಗಿ,ಲೋಹಿಯಾ ವಿಚಾರ ವೇದಿಕೆ ಮೂಲಕ ಜಿಲ್ಲೆಯಲ್ಲಿ ಸಾಮಾಜಿಕ ಕಳಕಳಿ ಇಟ್ಟುಕೊಂಡು ಕೆಲಸ ಮಾಡಿದ್ದಾರೆ. ತುಳಿತಕ್ಕೊಳಗಾದವವರು, ಬಡವರಿಗೆ ಸಾಕಷ್ಟು ಅರಿವು ಮೂಡಿಸಿ ಅವರನ್ನು ಮೇಲೆತ್ತುವ ಕೆಲಸ ಮಾಡಿದ್ದಾರೆ ಎಂದರು.
ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್ ಮಾತನಾಡಿ ಮಳವಳ್ಳಿ ಶಿವಣ್ಣ ಅವರು ಲೋಹಿಯಾ ವಿಚಾರ ವೇದಿಕೆ ಮೂಲಕ ತುಳಿತಕ್ಕೊಳಗಾದವರ ಪರ ಹೋರಾಟ ಮಾಡಿಕೊಂಡು ಬಂದಿದ್ದಾರೆ ಎಂದರು.
ಶಿವಣ್ಣ ಅವರು ದಡದಪುರ ಗ್ರಾಮದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ, ವಿದ್ಯಾರ್ಥಿಗಳಿಗೆ ಪರಿಕರ ವಿತರಣೆ, ಗ್ರಾಮದಲ್ಲಿ ಶೌಚಾಲಯ ನಿರ್ಮಾಣ, ಹೊಗೆಮುಕ್ತ ಹಳ್ಳಿಗಳ ನಿರ್ಮಾಣಕ್ಕೆ ಗ್ಯಾಸ್ ವಿತರಣೆ ಮಾಡುವ ಸಮಾಜಮುಖಿ ಕೆಲಸ ಮಾಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಎನ್. ಸೋಮಶೇಖರ್, ಸಿ.ಎಂ.ದ್ಯಾವಪ್ಪ, ಹಳುವಾಡಿ ವೆಂಕಟೇಶ್, ನಟರಾಜು, ಮಹೇಶ್, ಚನ್ನೇಗೌಡ ಇತರರು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ