Sunday, November 22, 2026

ಪ್ರಾಯೋಗಿಕ ಆವೃತ್ತಿ

ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದ ದಡದಪುರ ಬಿ.ಎಸ್.ಶಿವಣ್ಣ

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಡಾ. ರಾಮ ಮನೋಹರ ಲೋಹಿಯಾ ವಿಚಾರ ವೇದಿಕೆ ಅಧ್ಯಕ್ಷ ದಡದಪುರ ಬಿ.ಎಸ್‌.ಶಿವಣ್ಣ ಲ್ಯಾಪ್‌ಟಾಪ್‌ ವಿತರಿಸಿದರು.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಂಡ್ಯ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳ ಆರ್ಥಿಕವಾಗಿ ಹಿಂದುಳಿದ ಕುಟುಂಬದ ಇಂಜಿನಿಯರಿಂಗ್ ಹಾಗೂ ಎಂಬಿಬಿಎಸ್, ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಡಾ.ರಾಮ ಮನೋಹರ ಲೋಹಿಯಾ ವೇದಿಕೆಯ ವತಿಯಿಂದ ಲ್ಯಾಪ್‌ಟಾಪ್‌ ವಿತರಿಸಿ, ಉತ್ತಮವಾಗಿ ವಿದ್ಯಾಭ್ಯಾಸ ಮಾಡುವಂತೆ ಶುಭ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿ.ಎಸ್.ಶಿವಣ್ಣ ಅವರು, ಕಳೆದ 2019 ರಿಂದ ಡಾ. ರಾಮ ಮನೋಹರ ಲೋಹಿಯಾ ವೇದಿಕೆಯ ವತಿಯಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಲ್ಯಾಪ್‌ಟಾಪ್‌ ವಿತರಿಸುತ್ತಾ ಬಂದಿದ್ದೇನೆ. ಈಗಾಗಲೇ ಹಲವು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಣೆ ಮಾಡಿದ್ದೇನೆ. ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬದ ವಿದ್ಯಾರ್ಥಿಗಳ ಕಲಿಕೆಗೆ ನೆರವಾಗುವ ಉದ್ದೇಶದಿಂದ ನಮ್ಮ ವೇದಿಕೆ ಇಂತಹ ಹಲವು ಉಪಯುಕ್ತ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದೆ ಎಂದರು.

ಎಂಬಿಬಿಎಸ್ ವಿದ್ಯಾರ್ಥಿ ಸೈಯದ್ ಇರುಮ್, ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಸ್ನೇಹ, ಅನನ್ಯ,ಶರಣ್ಯ, ನಾಗೇಂದ್ರ, ಶಿವಕುಮಾರ, ಎಂಎಸ್ಸಿ ವಿದ್ಯಾರ್ಥಿ ಗುರು, ಎಂಕಾಂ.ವಿದ್ಯಾರ್ಥಿ ನವೀನ್ ಅವರಿಗೆ ಲ್ಯಾಪ್‌ಟಾಪ್ ವಿತರಿಸಿದ ಶಿವಣ್ಣ ಅವರು ಉತ್ತಮವಾಗಿ ವಿದ್ಯಾಭ್ಯಾಸದಲ್ಲಿ ತೊಡಗಿಕೊಳ್ಳುವಂತೆ ಶುಭ ಕೋರಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ