Monday, May 13, 2024

ಪ್ರಾಯೋಗಿಕ ಆವೃತ್ತಿ

ಸಂಘಪರಿವಾರ ಕಾರ್ಯಕರ್ತರ ಅನೈತಿಕ ಪೊಲೀಸ್‌ಗಿರಿ: ಕ್ರಮಕೈಗೊಳ್ಳುತ್ತೇವೆಂದ ಎಡಿಜಿಪಿ

ಬಸ್‌ನಲ್ಲಿ ಹಿಂದೂ ಯುವತಿಯೊಂದಿಗೆ ಕುಳಿತುಕೊಂಡಿದ್ದ ಎಂಬ ಕಾರಣಕ್ಕೆ ಮುಸ್ಲಿಂ ಹುಡುಗನ ಮೇಲೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿ ಅನೈತಿಕ ಪೊಲೀಸ್‌ಗಿರಿ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಕಾರ್ಕಳದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸ್ ನಲ್ಲಿ ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ ಒಂದೇ ಸೀಟಿನಲ್ಲಿ ಕುಳಿತುಕೊಂಡಿದ್ದರು ಎನ್ನಲಾಗಿದೆ. ನಂತೂರು ಬಳಿ ಬಸ್ ತಡೆದು ನಿಲ್ಲಿಸಿದ ಸಂಘಪರಿವಾರದ ಕಾರ್ಯಕರ್ತರು ಯಾವ ಕಾರಣವನ್ನು ಕೇಳದೆ ಬಸ್‌ನಿಂದ ಇಬ್ಬರನ್ನು ಕೆಳಗಿಳಿಸಿ ಏಕಾಏಕಿ ಯುವಕನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. 

 ಈ ಬಗ್ಗೆ  ಸಾಮಾಜಿಕ ಜಾಲತಾಣದಲ್ಲಿ ಭಾರಿ ವಿರೋಧ ವ್ಯಕ್ತವಾಗಿದ್ದು, ಸಂಘ ಪರಿವಾರದ ಅನೈತಿಕ ಪೊಲೀಸ್‌ ಗಿರಿ ವಿರುದ್ದ ನೆಟ್ಟಿಗರು ಕಿಡಿಕಾರಿದ್ದಾರೆ. ನೆಟ್ಟಿಗರೊಬ್ಬರ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಐಡಿಜಿಪಿ ಅಲೋಕ್‌ ಕುಮಾರ್, ಪುಂಡಾಟ ನಡೆಸಿರುವವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.

Appropriate action is being taken regarding this incident https://t.co/z5fSTqS7Mo

— alok kumar (@alokkumar6994) November 25, 2022

ಗಾಯಗೊಂಡ ಮುಸ್ಲಿಂ ಯುವಕ ಸಂಘಪರಿವಾರದ ಕಾರ್ಯಕರ್ತರ ವಿರುದ್ದ ಕದ್ರಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!