Tuesday, April 23, 2024

ಪ್ರಾಯೋಗಿಕ ಆವೃತ್ತಿ

ದಲಿತ ಹೋರಾಟಗಾರ ಹಾರೋಹಳ್ಳಿ ರವೀಂದ್ರ ಬಂಧನ

ದಲಿತ ಹೋರಾಟಗಾರ ಹಾಗೂ ಪತ್ರಕರ್ತ ಮೈಸೂರು ಜಿಲ್ಲೆಯ ಹಾರೋಹಳ್ಳಿ ರವೀಂದ್ರ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮೈಸೂರಿನ ವರುಣದಲ್ಲಿ ರವೀಂದ್ರ ಅವರನ್ನು ಬಂಧಿಸಲಾಗಿದ್ದು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಠಾಣೆ ಪೊಲೀಸರು ಅರೆಸ್ಟ್‌ ಮಾಡಿ ಕರೆದುಕೊಂಡು ಹೋಗುತ್ತಿದ್ದಾರೆಂಬ ತಿಳಿದುಬಂದಿದೆ. ಹಳೆಯ ಪೋಸ್ಟ್‌‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

2017ರಲ್ಲಿ ಸಂಸದ ಅನಂತ್‌ಕುಮಾರ್‌ ಹೆಗಡೆ, “ಜಾತ್ಯತೀತರಿಗೆ ಅಪ್ಪ ಅಮ್ಮ ಇಲ್ಲ” ಎಂದು ಹೇಳಿಕೆ ನೀಡಿದ್ದರು. ಹೆಗಡೆ ಹೇಳಿಕೆಗೆ ಸಾಕಷ್ಟು ವಿರೋಧ ವ್ಯಕ್ತವಾಗಿದ್ದವು. ಆಗ ಹಾರೋಹಳ್ಳಿಯವರು ಕಟುವಾಗಿ ಪೋಸ್ಟ್ ಹಾಕಿದ್ದರು. ಹಿಂದೂ ದೇವರುಗಳಿಗೆ ಅಪಮಾನ ಮಾಡಲಾಗಿದೆ ಎಂದು ರವೀಂದ್ರ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಚಂದ್ರಶೇಖರ್‌‌ ಬಾಪು ಮುಂಡೆ ಎಂಬವರು ಚಿಕ್ಕೋಡಿಯಲ್ಲಿ ದೂರು ದಾಖಲಿಸಿದ್ದರು. ಅದರ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿತ್ತು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!