Thursday, November 19, 2026

ಪ್ರಾಯೋಗಿಕ ಆವೃತ್ತಿ

ಚಿಕ್ಕಮಗಳೂರು | ದಲಿತ ಯುವಕರಿಂದ ದೇವಸ್ಥಾನ ಪ್ರವೇಶ : ದೇಗುಲಕ್ಕೆ ಬೀಗ ಹಾಕಿದ ತಹಶೀಲ್ದಾರ್

ದಲಿತರು ದೇವಸ್ಥಾನ ಪ್ರವೇಶ ಮಾಡಿದ್ದಾರೆಂದು ಗ್ರಾಮಸ್ಥರು ದೇವಾಲಯದಲ್ಲಿ ಪೂಜೆ ಸ್ಥಗಿತಗೊಳಿಸಿದ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ನರಸೀಪುರದಿಂದ ವರದಿಯಾಗಿದೆ.

ಈ ವಿವಾದದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ತಹಶೀಲ್ದಾರ್‌ ಡಾ.ಸುಮಂತ್‌, ರಾಜಸ್ವ ನಿರೀಕ್ಷಕರು ಭೇಟಿ ನೀಡಿ ತಿರುಮಲೇಶ್ವರ ದೇವಾಲಯಕ್ಕೆ ಬೀಗ ಹಾಕಿದ್ದಾರೆಂದು ತಿಳಿದು ಬಂದಿದೆ.

ಗ್ರಾಮದಲ್ಲಿ ಸುಮಾರು 250 ಕುರುಬ ಸಮುದಾಯದ ಕುಟುಂಬಗಳು ವಾಸವಾಗಿದ್ದರೆ, ಪರಿಶಿಷ್ಟ ಜಾತಿಯ ಸಮುದಾಯದಿಂದ ಕೇವಲ ಬೆರಣಿಕೆಯ 15 ಕುಟುಂಬಗಳು ಮಾತ್ರ ಈ ಹಳ್ಳಿಯಲ್ಲಿ ವಾಸಿಸುತ್ತಿದ್ದಾರೆ. ಇಲ್ಲಿನ ತಿರುಮಲೇಶ್ವರ ದೇವಸ್ಥಾನಕ್ಕೆ ಪರಿಶಿಷ್ಟ ಜಾತಿಯವರಿಗೆ ಪ್ರವೇಶ ನೀಡುತ್ತಿರಲಿಲ್ಲವೆನ್ನಲಾಗಿದೆ.

ಇಲ್ಲಿನ ಇಬ್ಬರು ಪರಿಶಿಷ್ಟ ಜಾತಿಯ ಯುವಕರು ದೇವಸ್ಥಾನಕ್ಕೆ ಹೋಗುತ್ತೇವೆಂದು ಮಂಗಳವಾರ ತಹಶೀಲ್ದಾರ್ ಡಾ. ಸುಮಂತ್‌ ಅವರಿಗೆ ಮನವಿ ಸಲ್ಲಿಸಿದ್ದರು. ದೇವಸ್ಥಾನದೊಳಗೆ ಪ್ರವೇಶಿಸಲು ತಮ್ಮ ಅಭ್ಯಂತರವಿಲ್ಲ ಎಂದು ಅಧಿಕಾರಿಗಳು ಅವರಿಗೆ ತಿಳಿಸಿದ್ದಾರೆನ್ನಲಾಗಿದೆ.

ಮಂಗಳವಾರ ಪೂಜೆ ನಡೆಯುತ್ತಿದ್ದ ವೇಳೆ ದಲಿತ ಯುವಕರು ದೇವಸ್ಥಾನದೊಳಗೆ ಪ್ರವೇಶಿಸಿದ್ದಾರೆ. ಈ ವೇಳೆ ಕುರುಬ ಸಮುದಾಯದವರು ಪೂಜೆ ಸಲ್ಲಿಸದೆ ಹಿಂದಿರುಗಿದ್ದಾರೆಂದು ತಿಳಿದು ಬಂದಿದೆ.

ದೇವಸ್ಥಾನವು 2012ರಲ್ಲಿ ಮುಜರಾಯಿ ಇಲಾಖೆಗೆ ಸೇರಿದ್ದು, ಕುರುಬರು ಸಮುದಾಯದವರು ಮಂಗಳವಾರ ಪೂಜೆ ಸ್ಥಗಿತಗೊಳಿಸಿ ಮನೆಗೆ ತೆರಳಿದ್ದಾರೆ ಎನ್ನಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ