Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಕಬ್ಬುಕಟಾವಿಗೆ ವ್ಯಾಪ್ತಿ ಗುರುತಿಸಿರುವುದು ಸರಿಯಲ್ಲ: ದರ್ಶನ್ ಪುಟ್ಟಣ್ಣಯ್ಯ

ಯಾವ ಕಾರ್ಖಾನೆಗಾದರೂ ಸರಿ ಮೊದಲು ಕಟಾವಿಗೆ ಬಂದಿರುವ ಕಬ್ಬನ್ನು ತೆಗೆದುಕೊಂಡು ಹೋಗಲು ಅವಕಾಶ ನೀಡಬೇಕು, ಮಂಡ್ಯ ಜಿಲ್ಲಾಡಳಿತ ಈಗಾಗಲೇ ಕಬ್ಬು ಕಟಾವಿಗೆ ಸಂಬಂಧಿಸಿದಂತೆ ಕಾರ್ಖಾನೆ ವ್ಯಾಪ್ತಿ ಗುರುತಿಸಿರುವುದನ್ನು ಹಿಂಪಡೆಯುವಂತೆ ಮನವರಿಕೆ ಮಾಡಿಕೊಡಲಾಗುವುದು ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು.

ಮಂಡ್ಯ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ಕಬ್ಬುಕಟಾವು ವಿಳಂಬವಾಗಿ 16 ಮತ್ತು 17 ತಿಂಗಳು ಕಳೆದ ಹಾಗೂ ಅವಧಿ ಮೀರಿರುವ ಕಬ್ಬಿನ ಮಾಹಿತಿ ಪಡೆದು ರೈತರಿಗೆ ಪರಿಹಾರ ಕೊಡಿಸುವ ಬಗ್ಗೆ ಸರ್ಕಾರ ಗಮನಕ್ಕೆ ತರಲಾಗುವುದು ಎಂದರು.

ಕಟಾವಿಗೆ ಬಂದಿರುವ ಕಬ್ಬನ್ನು ನಿಗಧಿತ ಸಮಯದಲ್ಲಿ ಕಟಾವು ಮಾಡಲು ಸಾಧ್ಯವಾಗದೇ ಇದ್ದರೆ, ಅಂತಹ ಕಬ್ಬುಗಳನ್ನು ಬೇರೆ ಕಾರ್ಖಾನೆಗೆ ಕಟಾವು ಮಾಡಿಕೊಂಡು ತೆಗೆದುಕೊಂಡು ಹೋಗಲು ಅವಕಾಶ ಮಾಡಿಕೊಟ್ಟರೆ ರೈತರಿಗೆ ಹೆಚ್ಚು ಅನುಕೂಲವಾಗಲಿದೆ. ಇದನ್ನು ಪರಿಗಣಿಸುವಂತೆ ಸಂಬಂಧಪಟ್ಟವರಿಗೆ ತಿಳಿಸುತ್ತೇನೆ ಎಂದರು.

ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪುತ್ತಿದಿಯಾ ಎಂಬುದನ್ನು ಪರಿಶೀಲನೆ ನಡೆಸಬೇಕಿದೆ. ಅಭಿವೃದ್ಧಿಗೆ ಇದರಿಂದ ತೊಂದರೆ ಇದಿಯಾ ಎಂಬ ಅಂಶವನ್ನು ತಿಳಿದುಕೊಂಡು ಅದನ್ನು ಮರು ಪರಿಶೀಲನೆ ನಡೆಸಿದರೆ ಒಳಿತಾಗುತ್ತದೆ. ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುವ ನಿಟ್ಟಿನಲ್ಲಿ ಕೆಲಸ ನಡೆಯಬೇಕೆಂದು ಕೆಲವು ಜನರು ಹೇಳುತ್ತಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಎಲ್ಲರ ಸಹಕಾರವೂ ಮುಖ್ಯವಾಗಿದೆ

ಭ್ರೂಣ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರಿಗೆ ಧನ್ಯವಾದ ತಿಳಿಸುತ್ತೇನೆ, ಇಂತಹ ಪ್ರಕರಣಗಳು ಜಿಲ್ಲೆಯಲ್ಲಿ ಅಷ್ಟೇ ಅಲ್ಲ ಎಲ್ಲಿಯೂ ಇದು ನಡೆಯಬಾರದು, ಎಲ್ಲರಿಗೂ ಬದುಕುವ ಹಕ್ಕಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಭ್ರೂಣ ಹತ್ಯೆ ನಡೆಯುವುದನ್ನು ತಡೆಯುವಲ್ಲಿ ಎಲ್ಲರ ಸಹಕಾರವೂ ಮುಖ್ಯವಾಗಿದೆ. ಆರೋಗ್ಯ ಇಲಾಖೆ, ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆಯು ಹೆಚ್ಚು ನಿಗಾವಹಿಸಬೇಕು ಎಂದು ತಿಳಿಸಿದರು.

ರೈತಸಂಘ ಜಿಲ್ಲಾಧ್ಯಕ್ಷ ಅಧ್ಯಕ್ಷ ಎ.ಎಲ್‌.ಕೆಂಪೂಗೌಡ, ತಾಲ್ಲೂಕು ಅಧ್ಯಕ್ಷ ಚಂದ್ರಶೇಖರ್‌ ಶಿವಳ್ಳಿ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!