ಪ್ರಸ್ತುತ ಸಂದರ್ಭದಲ್ಲಿ ಖಾದಿ ನೇಕಾರರನ್ನು ಮತ್ತು ಗ್ರಾಮೋದ್ಯೋಗವನ್ನು ಸಾರ್ವಜನಿಕರು ಉಳಿಸಬೇಕಾಗಿದೆ ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕಳಕಳಿ ವ್ಯಕ್ತಪಡಿಸಿದರು.
ಮಂಡ್ಯ ವಿಶ್ವವಿದ್ಯಾನಿಲಯ ಆವರಣದಲ್ಲಿ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಹಾಗೂ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ನಡೆಯುತ್ತಿರುವ ಖಾದಿ ಉತ್ಸವ- 2025 ರಾಜ್ಯ ಮಟ್ಟದ ಖಾದಿ ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟ ಮಳಿಗೆಗೆ ಭೇಟಿ ನೀಡಿ ಅವರು ಮಾತನಾಡಿದರು.
ಖಾದಿ ಉತ್ಸವವು ಫೆಬ್ರವರಿ 7 ರಿಂದ 21 ರವರೆಗೆ ನಡೆಯಲಿದ್ದು, ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳಬೇಕೆಂದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಮುಖ್ಯಸ್ಥ ಸುಧಾಮ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು.




