Thursday, November 19, 2026

ಪ್ರಾಯೋಗಿಕ ಆವೃತ್ತಿ

ಸಮಾಜಮುಖಿ ಕೆಲಸ ಮಾಡುವ ಹೃದಯವಂತರು ಅಗತ್ಯ : ದರ್ಶನ್ ಪುಟ್ಟಣ್ಣಯ್ಯ

ಸ್ವಾರ್ಥವೇ ತುಂಬಿರುವ ಇಂದಿನ ಕಾಲಘಟ್ಟದಲ್ಲಿ ಸಮಾಜಮುಖಿಯಾಗಿ ಕೆಲಸ ಮಾಡುವ ಹೃದಯವಂತ ಜನರು ಹಿಂದಿನ ಸಮಾಜಕ್ಕೆ ಅಗತ್ಯವಾಗಿ ಬೇಕಾಗಿದ್ದಾರೆ ಎಂದು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.

ಕೃಷ್ಣರಾಜಪೇಟೆ ತಾಲೂಕಿನ ಗಡಿ ಗ್ರಾಮವಾದ ಅಲ್ಪಹಳ್ಳಿಯಲ್ಲಿ ವರಸಿದ್ಧಿ ಕಾಲಭೈರವೇಶ್ವರ ಸೇವಾ ಟ್ರಸ್ಟ್ ವತಿಯಿಂದ ನೂತನವಾಗಿ ನಿರ್ಮಿಸುತ್ತಿರುವ ಶ್ರೀ ಕಾಲಭೈರವೇಶ್ವರ ದೇವಸ್ಥಾನದ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿ ಭೂಮಿ ಪೂಜೆ ಮಾಡಿ ನೆರೆದಿದ್ದ ಭಕ್ತಾದಿಗಳನ್ನು ಉದ್ದೇಶಿಸಿ ಮಾತನಾಡಿದರು.

ಪ್ರಗತಿಪರ ರೈತರು ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರಾದ ವೆಂಕಟೇಶಣ್ಣ ಅವರು ಅಲ್ಪಹಳ್ಳಿ ಗ್ರಾಮದಲ್ಲಿ ಶ್ರೀಮಠ ಹಾಗೂ ಕಾಲಭೈರವೇಶ್ವರ ಸ್ವಾಮಿ ದೇವಾಲಯದ ನಿರ್ಮಾಣಕ್ಕಾಗಿ ಬೆಲೆಬಾಳುವ ಭೂಮಿಯನ್ನು ದಾನ ಮಾಡಿ ಮಠ ಮಂದಿರಗಳು ಹಾಗೂ ದೇವಾಲಯದ ನಿರ್ಮಾಣಕ್ಕೆ ನಾಂದಿ ಹಾಡಿರುವುದು ಒಳ್ಳೆಯ ವಿಚಾರವಾಗಿದೆ ಎಂದರು.

ಶ್ರೀರಂಗಪಟ್ಟಣ ತಾಲೂಕಿನ ಚಂದ್ರವನ ಆಶ್ರಮದ ಡಾ.ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ  ಸಾನಿಧ್ಯ ವಹಿಸಿ ಮಾತನಾಡಿ ನಾವು ಸತ್ತಾಗ ಏನನ್ನು ಕೊಂಡು ಹೋಗುವುದಿಲ್ಲ, ನಮ್ಮನ್ನು ಹಿಂಬಾಲಿಸುವುದು ಪಾಪ ಪುಣ್ಯಗಳ ಮೂಟೆಯೇ ಹೊರತು ನಾವು ಸಂಪಾದಿಸಿರುವ ಆಸ್ತಿಪಾಸ್ತಿಯಲ್ಲ, ಧನ ಕನಕಗಳಲ್ಲ, ಆದ್ದರಿಂದ ನಮ್ಮ ಜೀವಿತದ ಅವಧಿಯಲ್ಲಿ ಸೇವಾ ಮನೋಭಾವನೆ ಹಾಗೂ ಪರೋಪಕಾರ ಗುಣಗಳನ್ನು ಮೈಗೂಡಿಸಿಕೊಳ್ಳಬೇಕೆಂದರು.ಯನ್ನು ಹೊರಲು ಸಾರ್ಥಕ ಜೀವನ ನಡೆಸಬೇಕು ಎಂದು ಕಿವಿಮಾತು ಹೇಳಿದರು.

ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದ ಶಿವಬಸವ ಸ್ವಾಮೀಜಿ, ಕಾಪನಹಳ್ಳಿ ಗವಿಮಠದ ಚನ್ನವೀರಯ್ಯ ಸ್ವಾಮಿಜಿ, ಮಂಡ್ಯ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ಇಂದ್ರೇಶ್, ಕೆ.ಎಸ್. ಬಸವೇಗೌಡ, ಪಾಂಡವಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಎಸ್. ಜಯರಾಮು, ತ್ರಿಶೋಭಾನಂದ ಸ್ವಾಮೀಜಿ , ಭೂದಾನಿಗಳಾದ ವೆಂಕಟೇಶಣ್ಣ, ರೈತ ಸಂಘದ ಮುಖಂಡರಾದ ರಾಘವ ಪ್ರಕಾಶ್, ಗಿರಿಧರ್ ಬಾರ್ಕೂರು ಗಂಗಾಧರ ಶಾಸ್ತ್ರಿ, ಜಿ.ಪಂ.ಮಾಜಿ ಸದಸ್ಯ ಅಶೋಕ್, ಶ್ರೀರಂಗಪಟ್ಟಣ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಂಎಲ್ ದಿನೇಶ್, ಮಂಡ್ಯ ಹಾಲು ಒಕ್ಕೂಟದ ನಿರ್ದೇಶಕ ಡಾಲು ರವಿ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಬೆಂಗಳೂರಿನ ನಯೋನಿಕ ಐ ಕೇರ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಶ್ರೀ ವರಸಿದ್ಧಿ ಕಾಲಭೈರವೇಶ್ವರ ಸೇವಾ ಟ್ರಸ್ಟ್ ಸಹಯೋಗದಲ್ಲಿ ಏರ್ಪಡಿಸಲಾಗಿತ್ತು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ