ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರ ಪರ ಪ್ರಚಾರ ನಡೆಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮೇ 3ರಂದು ಮಧ್ಯಾಹ್ನ 3 ಗಂಟೆ ಪಾಂಡವಪುರಕ್ಕೆ ಆಗಮಿಸಲಿದ್ದಾರೆಂದು ಕಾಂಗ್ರೆಸ್ ಮುಖಂಡ ರವಿ ಬೋಜೇಗೌಡ ಹೇಳಿದರು.
ಮಂಡ್ಯ ತಾಲ್ಲೂಕಿನ ದುದ್ದ ಹೋಬಳಿಯ ಮುದಗಂದೂರು ಗ್ರಾಮದಲ್ಲಿ ದರ್ಶನ್ ಪುಟ್ಟಣ್ಣಯ್ಯ ಪರ ಪ್ರಚಾರ ನಡೆಸಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಆಗಮನದ ಹಿನ್ನೆಲೆಯಲ್ಲಿ ದುದ್ದ ಹೋಬಳಿಯಿಂದ ಹೆಚ್ಚಿನ ಪ್ರಮಾಣದಲ್ಲಿ ಕಾರ್ಯಕರ್ತರು ಆಗಮಿಸಬೇಕೆಂದರು. ಅಲ್ಲದೇ ದುದ್ದ ಹೋಬಳಿಯಿಂದ ಪಾಂಡವಪುರದವರಗೆ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಜನರು ಭಾಗವಹಿಸಬೇಕೆಂದು ಮನವಿ ಮಾಡಿದರು.

ಮುದಗಂದೂರು ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಕಹಳೆ ಊದುತ್ತಿರುವ ರೈತನ ಗುರುತಿಗೆ ನಿಮ್ಮ ಅಮೂಲ್ಯವಾದ ಮತವನ್ನು ನೀಡಬೇಕೆಂದು ಮನವಿ ಮಾಡಿದರು. ಮುದಗಂದೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸುತ್ತ ಮುತ್ತಲಿನ ಗ್ರಾಮದ ಕಾಂಗ್ರೆಸ್ ಮುಖಂಡರು ಹಾಗೂ ರೈತಸಂಘದ ಮುಖಂಡರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮುಖಂಡರಾದ ಶಿವಕುಮಾರ್, ಧರ್ಮಣ್ಣ, ಆನಂದ, ಹೊನ್ನೇಗೌಡ್ರು, ನಾಗೇಂದ್ರ, ಚೇತನ್, ಚಂದ್ರು ಮತ್ತಿತರರು ಭಾಗವಹಿಸಿದ್ದರು.




