Saturday, November 21, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಮರ್ಯಾದಾ ಹತ್ಯೆ ಖಂಡಿಸಿ ದಸಂಸ ಪ್ರತಿಭಟನೆ

ರಾಜ್ಯದ ದಲಿತರ ಮಾನ-ಪ್ರಾಣ, ಆಸ್ತಿ ಸಂರಕ್ಷಿಸುವಲ್ಲಿ ರಾಜ್ಯ ಸರ್ಕಾರದ ವೈಫಲ್ಯವಾಗಿದ್ದು, ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ಮರ್ಯಾದಾ ಹತ್ಯೆ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಮಂಡ್ಯ ನಗರದ ಸರ್.ಎಂ.ವಿ ಪ್ರತಿಮೆಯಿಂದ ಪ್ರತಿಭಟನಾ ಮೆರವಣಿಗೆ ಹೊರಟ ಪ್ರತಿಭಟನಕಾರರು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಎದುರು ಜಮಾಯಿಸಿ ರಾಜ್ಯ ಸರ್ಕಾರ ಮತ್ತು ರಾಜ್ಯ ಪೊಲೀಸ್ ವ್ಯವಸ್ಥೆ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರಜಾತಂತ್ರ ಮೌಲ್ಯ ಮತ್ತು ಜಾತ್ಯಾತೀತ ತತ್ವ ಸಹಿತ ಭಾರತ ಸಂವಿಧಾನ ರಕ್ಷಣೆಯ ಮಾತನಾಡುವ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ದಲಿತರ ಮಾನ-ಪ್ರಾಣ, ಆಸ್ತಿ ಸಂರಕ್ಷಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಹುಬ್ಬಳ್ಳಿ “ಮರ್ಯಾದಾ ಹತ್ಯೆ” ಪ್ರಕರಣ ನಡೆದಿರುವುದು ನಾಚಿಕೆಗೇಡು ಎಂದು ಖಂಡಿಸಿದರು.

ಹುಬ್ಬಳ್ಳಿ “ಮರ್ಯಾದಾ ಹತ್ಯೆ” ಪ್ರಕರಣದ ಪೂರ್ವದ ಅರಿವಿದ್ದರೂ ಹತ್ಯೆಯನ್ನು ತಡೆಯಲಾಗದೆ, ಕೈಚೆಲ್ಲಿದ ಪೋಲೀಸರ ವೈಫಲ್ಯಕ್ಕೆ ಅಲ್ಲಿನ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯನ್ನು ಈ ಕೂಡಲೆ ಸೇವೆಯಿಂದ ವಜಾಗೊಳಿಸಬೇಕು. ಈ ಕ್ರೌರ್ಯ ಮೆರದ ಆರೋಪಿಗಳಿಗೆ “ಗಲ್ಲು ಶಿಕ್ಷೆ”ಗೆ ಗುರಿಪಡಿಸಲು ಸಮರ್ಪಕವಾದ ತನಿಖೆಗಾಗಿ ಎಸ್.ಐ.ಟಿ ಮೂಲಕ ತನಿಖೆ ನಡೆಸಲು ರಾಜ್ಯ ಸರ್ಕಾರ ಮುಂದಾಗಬೇಕು ಒತ್ತಾಯಿಸಿದರು.

ಕದಸಂಸ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವು ಕಾರ್ಯಕರ್ತರು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ