Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಹಿಳೆಯರ ಬೆತ್ತಲೆ ಮೆರವಣಿಗೆ ನಡೆಸಿದವರನ್ನು ಗಲ್ಲಿಗೇರಿಸಿ – ದಸಂಸ ಆಗ್ರಹ

ಮಣಿಪುರದಲ್ಲಿ ಕುಕಿ ಜೋ ಬುಡಕಟ್ಟು ಸಮುದಾಯದ ಮಹಿಳೆಯರನ್ನು ಬೆತ್ತಲುಗೊಳಿಸಿ ಸಾರ್ವಜನಿಕವಾಗಿ ಮೆರವಣಿಗೆ ಮಾಡಿ, ಸಾಮೂಹಿಕ ಅತ್ಯಾಚಾರ ಮಾಡಿರುವ ದುಷ್ಕರ್ಮಿಗಳಿಗೆ ಗಲ್ಲುಶಿಕ್ಷೆ ಆಗುವಂತೆ ಅಲ್ಲಿನ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ವಿಭಾಗೀಯ ಸಂಚಾಲಕ ಶಿವರಾಜ್ ಮರಳಿಗ ಒತ್ತಾಯಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 3 ತಿಂಗಳಿನಿಂದ ಜನಾಂಗೀಯ ಸಂಘರ್ಷ ಮತ್ತು ಹಿಂಸಾಚಾರದಿಂದ ನಲುಗಿ ಹೋಗಿರುವ ಮಣಿಮರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನಿಯಂತ್ರಿಸುವಲ್ಲಿ ವಿಫಲರಾಗಿರುವ ಮಣಿಪುರ ಮುಖ್ಯಮಂತ್ರಿ  ಬಿರೇನ್ ಸಿಂಗ್ ಸರ್ಕಾರವನ್ನು ವಜಾಗೊಳಿಸಿ, ರಾಷ್ಟ್ರಪತಿ ಆಡಳಿತ ಜಾರಿ ಮಾಡುವಂತೆ ಒತ್ತಾಯಿಸಿದರು.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ವಿಫಲವಾಗಿರುವ ಮಣಿಪುರದ ಮುಖ್ಯಮಂತ್ರಿ ಬೀರೇನ್ ಸಿಂಗ್, ಕೇಂದ್ರ ಗೃಹಮಂತ್ರಿ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಗಳಿಗೆ ರಾಜಿನಾಮೆ ಕೊಡಬೇಕು ಎಂದು ಆಗ್ರಹಿಸಿದರು.

ಜಾಹೀರಾತು

ಈಶ್ಯಾನ ರಾಜ್ಯವಾದ ಮಣಿಮರ ಸುಮಾರು ಮೂರು ತಿಂಗಳುಗಳಿಂದ ಜನಾಂಗೀಯ ಸಂಘರ್ಷ ಮತ್ತು ಹಿಂಸಾಚಾರದಿಂದ ನಲುಗಿ ಹೋಗಿದೆ. ಈ ಹಿಂಸಾಚಾರದಿಂದ ಇರುವರೆಗೆ 165 ಜನ ಮೃತಪಟ್ಟಿದ್ದಾರೆ. ಕುಕಿ ಬುಡಕಟ್ಟಿಗೆ ಸೇರಿದ ಇಬ್ಬರು ಮಹಿಳೆಯರನ್ನು ಸಂಪೂರ್ಣ ಬೆತ್ತಲು ಮಾಡಿ ಅವರ ಮೇಲೆ ಪುಂಡರ ಗುಂಪೊಂದು, ಲೈಂಗಿಕ ದೌರ್ಜನ್ಯ ನಡೆಸಿದ ವಿಡಿಯೋ ಒಂದು ಇತ್ತೀಚೆಗೆ ಜಾಲತಾಣಗಳಲ್ಲಿ ಹರಿದಾಡಿದೆ. ಇದು ಮಣಿಪುರ ಹಿಂಸಾಚಾರದ ಆಘಾತಕಾರಿ ಮುಖವನ್ನು ತೆರೆದಿಟ್ಟು, ಹಿಂಸಾಚಾರದ ಕರಾಳ ಮುಖವನ್ನು ಇಡೀ ದೇಶಕ್ಕೆ ತೋರಿಸಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಕಾನೂನಿನ ಆಡಳಿತಕ್ಕೆ ಒಳಪಟ್ಟ ಯಾವುದೇ ನಾಗರೀಕ ಸಮಾಜವು ಇಂತಹ ಹೀನ ಕೃತ್ಯ ಎಸಗಿದವರ ಮೇಲೆ ತಕ್ಷಣ ಕ್ರಮ ಕೈಗೊಳ್ಳುತ್ತಿತ್ತು. ಮೇ ತಿಂಗಳಲ್ಲಿ ಎಫ್.ಐ.ಆರ್.ದಾಖಲಾಗಿದೆ ಮತ್ತು ಘಟನೆಯು ಹೇಗೆನಡೆದಿದೆ ಎಂಬ ವಿಡಿಯೋ ಅದರಲ್ಲಿದೆ, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವವರೆಗೆ ಯಾವುದೇ ತನಿಖೆ ನಡೆದಿರಲಿಲ್ಲ ಹಾಗೂ ಯಾರನ್ನು ಬಂಧಿಸಿರಲ್ಲಿಲ್ಲ. ಇದನ್ನು ಸೂಕ್ಷ್ಮವಾಗಿ ಗಮನಿಸಿದಾಗ ರಾಜ್ಯ ಸರ ಮತ್ತು ಕೇಂದ್ರ ಸರ್ಕಾರ, ತಪ್ಪಿತಸ್ಥರ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳದೇ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಸಂಶಯ ವ್ಯಕ್ತಪಡಿಸಿದರು.

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ಖಂಡಿಸಿ ಹಾಗೂ ನೊಂದವರಿಗೆ ಕೂಡಲೇ ನ್ಯಾಯ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಯು ಜು.27ರಂದು ರಾಜ್ಯದಾದ್ಯಂತ ಏಕಕಾಲದಲ್ಲಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿ ಹಕ್ಕೊತ್ತಾಯಗಳನ್ನು ಈಡೇರಿಸಬೇಕೆಂದು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಗೋಷ್ಠಿಯಲ್ಲಿ ಜಿಲ್ಲಾ ಸಂಚಾಲಕ ಶ್ರೀನಿವಾಸ್ ಮದ್ದೂರು, ಶಂಕರ್ ನಿಡಘಟ್ಟ, ಅಪ್ಪಾಜಿ, ಗುರುಲಿಂಗಯ್ಯ ಹಾಘೂ ಪುಟ್ಟಲಿಂಗಯ್ಯ ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!