Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ ಜಿಲ್ಲಾಧಿಕಾರಿ ವರ್ಗಾವಣೆ ; ನೂತನ ಡಿಸಿ ಡಾ.ಕುಮಾರ್

ರಾಜ್ಯ ಸರ್ಕಾರ ಮಂಡ್ಯ ಜಿಲ್ಲಾಧಿಕಾರಿಯಾಗಿದ್ದ ಡಾ.ಹೆಚ್.ಎನ್.ಗೋಪಾಲಕೃಷ್ಣ ಸೇರಿದಂತೆ 10 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇದೇ ಸಂದರ್ಭದಲ್ಲಿ ಮಂಡ್ಯದ ನೂತನ ಜಿಲ್ಲಾಧಿಕಾರಿಯಾಗಿ ಡಾ.ಕುಮಾರ್ ಅವರನ್ನು ನೇಮಕ ಮಾಡಿದೆ.

ಜಾಹೀರಾತು

1992 ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾದ ಡಾ. ಕುಮಾರ್ ಅವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ಮತ್ತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ನ ಹಿರಿಯ ಉಪ ಮಹಾನಿರ್ದೇಶಕರಾಗಿ 2011 ರಿಂದ 2017 ರವರೆಗೆ ಸೇವೆ ಸಲ್ಲಿಸಿದ್ದಾರೆ. ನಂತರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!