Thursday, September 19, 2024

ಪ್ರಾಯೋಗಿಕ ಆವೃತ್ತಿ

ಪೌರಕಾರ್ಮಿಕರಿಗೆ ಎಲ್ಲಾ ಸೌಲಭ್ಯ ನೀಡಲು ಡಿಸಿ ಸೂಚನೆ

ನಮ್ಮ ಸುತ್ತಮುತ್ತಲ ಪರಿಸರವನ್ನು ಸ್ವಚ್ಛ ಮಾಡಿ ಸದಾ ಶುಚಿಗೊಳಿಸುವ ಪೌರಕಾರ್ಮಿಕರಿಗೆ ಎಲ್ಲಾ ಸೌಲಭ್ಯಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಅಶ್ವತಿ ಅಧಿಕಾರಿಗಳಿಗೆ ಸೂಚಿಸಿದರು.

ಮಂಡ್ಯ ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ನಡೆದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ವೃತ್ತಿ ನಿಷೇಧ ಮತ್ತು ಅವರ ಪುನರ್ ವಸತಿ ಕಾಯ್ದೆ ಅನುಷ್ಠಾನಗೊಳಿಸುವ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶ್ರೀರಂಗಪಟ್ಟಣದ ಪೌರಕಾರ್ಮಿಕರಿಗೆ ವಸತಿ ಸೌಲಭ್ಯ ಒದಗಿಸಲು ಪುರಸಭೆಯ ಅಧೀನದಲ್ಲಿರುವ ಸ್ಥಳವನ್ನು ಪರಿಶೀಲಿಸಿ ನಿವೇಶನ ಒದಗಿಸುವಂತೆ ಶ್ರೀರಂಗಪಟ್ಟಣ ಪುರಸಭೆ ಮುಖ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಪೌರಕಾರ್ಮಿಕರಿಗೆ ಶವ ಸಂಸ್ಕಾರಕ್ಕೆ ಅನುಕೂಲವಾಗುವಂತೆ ಎಲ್ಲಾ ಸ್ಮಶಾನ ಭೂಮಿಗಳಲ್ಲಿ ಸಾರ್ವಜನಿಕ ಸ್ಮಶಾನ ಎಂದು ಬೋರ್ಡ್ ಗಳನ್ನು ಅಳವಡಿಸುವಂತೆ ಈ ಗಾಗಲೇ ತಿಳಿಸಲಾಗಿತ್ತು. ಆದರೆ
ಕೆಲವು ಸ್ಮಶಾನಗಳ ಮುಂಭಾಗ ಬೋರ್ಡ್ ಅಳವಡಿಕೆಯಾಗಿರುವುದಿಲ್ಲ. ಮುಂದಿನ ಸಭೆಯೊಳಗೆ ಬೋರ್ಡ್ ಗಳನ್ನು ಹಾಕಿ ಛಾಯಾಚಿತ್ರದೊಂದಿಗೆ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.

ಹೊರಗುತ್ತಿಗೆ ಮೇಲೆ ನೇಮಕವಾಗಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರಿಗೆ ಸರ್ಕಾರ ನಿಗದಿಪಡಿಸಿರುವಂತೆ ಇಎಸ್ಐ , ಫಿಎಫ್ ಹಾಗೂ ಕನಿಷ್ಠ ವೇತನ ಪಾವತಿಯಾಗಬೇಕು.ಈ ಸಂಬಂಧ ಕಾರ್ಮಿಕ ಅಧಿಕಾರಿಗಳು ಕಚೇರಿಗಳಿಗೆ ಭೇಟಿ ನೀಡಿ ವೇತನ ಪಾವತಿಯನ್ನು ಪರಿಶೀಲನೆ ನಡೆಸಬೇಕು ಎಂದರು.

ಸಂಬಳದ ದೃಢೀಕರಣ ಪತ್ರವನ್ನು ಯಾವುದೇ ವಿಳಂಬ ಮಾಡದೆ ಸಮಯಕ್ಕೆ ಸರಿಯಾಗಿ ನೀಡಿ.ಅವರಿಗೆ ತೊಂದರೆಯಾಗದ ರೀತಿಯಲ್ಲಿ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ವಿ.ಆರ್.ಶೈಲಜ ಅವರು ಸೂಚಿಸಿದರು.

ಪಾಂಡವಪುರ ಪುರಸಭೆಯಲ್ಲಿ 12, ಮಳವಳ್ಳಿಯಲ್ಲಿ 10, ಹಾಗೂ ಬೆಳ್ಳೂರು ಪುರಸಭೆಯಲ್ಲಿ 8 ವಸತಿ ಗೃಹದಲ್ಲಿ ವಾಸಮಾಡುತ್ತಿರುವ ಪೌರಕಾರ್ಮಿಕರಿಗೆ ಹಕ್ಕು ಪತ್ರವನ್ನು ನೀಡುವ ಸಂಬಂಧ ಸಭೆ ನಡೆಸಿ ಅಗತ್ಯಕ್ರಮ ಕೈಗೊಳ್ಳುವಂತೆ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಪಾಂಡವಪುರ ಉಪವಿಭಾಗಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ,ಮಂಡ್ಯ ಉಪವಿಭಾಗಾಧಿಕಾರಿ ಆರ್.ಐಶ್ವರ್ಯ, ಜಿ.ಪಂ.ಯೋಜನಾಧಿಕಾರಿ ಪ್ರಭುಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಬಿ.ರಂಗೇಗೌಡ, ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆಯ ಸದಸ್ಯರಾದ ನಂಜುಂಡಮೌರ್ಯ, ಪಳನಿಯಮ್ಮ ,ಪಾಪಮ್ಮ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!