Friday, November 20, 2026

ಪ್ರಾಯೋಗಿಕ ಆವೃತ್ತಿ

ಕಾರು ಡಿಕ್ಕಿ : ವೃದ್ದೆ ಸ್ಥಳದಲ್ಲೇ ಸಾವು

ರಸ್ತೆ ದಾಟುತ್ತಿದ್ದ ವೃದ್ದೆಗೆ ಕಾರು ಡಿಕ್ಕಿ ಹೊಡೆದು ವೃದ್ದೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲ್ಲೂಕಿನ ಹಳೇ ಬೂದನೂರು ಗ್ರಾಮದಲ್ಲಿ‌ ಜರುಗಿದೆ.

ಶನಿವಾರ ಬೆಳಿಗ್ಗೆ 11 ಗಂಟೆ ಸುಮಾರಿನಲ್ಲಿ ಗ್ರಾಮದ ವಿಶ್ವೇಶ್ವರಯ್ಯ ನಾಲೆ ಬಳಿ‌ ಮೈಸೂರು- ಬೆಂಗಳೂರು ಹೈವೇ ದಾಟುತ್ತಿದ್ದಾಗ ಅತಿವೇಗದಲ್ಲಿ ಬಂದ ಕಾರು ವೃದ್ದೆಗೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ತಲೆಗೆ ತೀವ್ರ ಪಟ್ಟು ವೃದ್ದೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಶವವನ್ನು‌ ಮಿಮ್ಸ್ ಶವಗಾರದಲ್ಲಿ ಇಡಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ