Thursday, September 19, 2024

ಪ್ರಾಯೋಗಿಕ ಆವೃತ್ತಿ

ವಯನಾಡ್ ಭೂಕುಸಿತ| ಸಾವಿನ ಸಂಖ್ಯೆ 54ಕ್ಕೆ ಏರಿಕೆ: ಸಂಸತ್ತಿನಲ್ಲಿ ಧ್ವನಿಯೆತ್ತಿದ ರಾಹುಲ್ ಗಾಂಧಿ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಡಿ, ಮುಂಡಕ್ಕೈ, ಚೂರಲ್ಮಲ, ಅಟ್ಟಮಲ, ನೂಲ್ಪುಝ ಪ್ರದೇಶಗಳಲ್ಲಿ ಸಂಭವಿಸಿದ ಭೀಕರ ಭೂಕುಸಿತ, ಜಲಪ್ರಳಯದಲ್ಲಿ ಸಾವನಪ್ಪಿದವರ ಸಂಖ್ಯೆ 54 ದಾಟಿದೆ.

ವರದಿಗಳ ಪ್ರಕಾರ, ಇನ್ನೂ 100ಕ್ಕೂ ಅಧಿಕ ಜನರು ನಾಪತ್ತೆಯಾಗಿರುವ ಶಂಕೆಯಿದೆ. ಹಲವಾರು ಮಂದಿ ಗಾಯಗೊಂಡು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಎನ್‌ಡಿಆರ್‌ಎಫ್‌ ತಂಡಗಳು, ವಿವಿಧ ಸಂಘ-ಸಂಸ್ಥೆಗಳ ಸ್ವಯಂ ಸೇವಕರು ಮತ್ತು ಸ್ಥಳೀಯರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧಿಕಾರಿಗಳ ಸಭೆ ನಡೆಸಿ ಘಟನೆಯ ಮಾಹಿತಿ ಪಡೆದಿದ್ದಾರೆ. ಆರೋಗ್ಯ ಸಚಿವೆ ವೀಣಾ ಜಾರ್ಜ್ ಅಧಿಕಾರಿಗಳ ಸಭೆ ನಡೆಸಿದ್ದು, ಗಾಯಾಳುಗಳ ಚಿಕಿತ್ಸೆ ಸೇರಿದಂತೆ ಆಸ್ಪತ್ರೆಗಳಿಗೆ ಬೇಕಾದ ಎಲ್ಲಾ ತುರ್ತು ಸೌಲಭ್ಯಗಳನ್ನು ತ್ವರಿತವಾಗಿ ಒದಗಿಸುವಂತೆ ಸೂಚಿಸಿದ್ದಾರೆ.

ಮತ್ತೊಂದೆಡೆ, ವಯನಾಡ್‌, ಮಲಪ್ಪುರಂ, ಕೋಯಿಕ್ಕೋಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಇಂದು (ಮಂಗಳವಾರ) ‘ರೆಡ್ ಅಲರ್ಟ್’ಘೋಷಿಸಿದೆ.

ಸಂಸತ್‌ನಲ್ಲಿ ವಿಷಯ ಪ್ರಸ್ತಾಪ

ವಯನಾಡ್ ನಲ್ಲಿ ಸಂಭವಿಸಿರುವ ಭೀಕರ ಭೂಕುಸಿತದ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ್ದಾರೆ. ಸರ್ಕಾರ ರಕ್ಷಣೆ, ಪರಿಹಾರ ಸೇರಿದಂತೆ ಎಲ್ಲಾ ಕಾರ್ಯಗಳಲ್ಲಿ ವಿಶೇಷ ಗಮನಹರಿಸಿ, ಅಗತ್ಯವಿರುವ ವ್ಯವಸ್ಥೆಗಳನ್ನು ಮಾಡಿಕೊಡುವಂತೆ ಕೋರಿದ್ದಾರೆ.

“>

ರಾಜ್ಯ ಸಭೆಯಲ್ಲೂ ಕೇರಳದ ಜನ ಪ್ರತಿನಿಧಿಗಳು ವಿಷಯ ಪ್ರಸ್ತಾಪಿಸಿದ್ದು, ವಯನಾಡ್ ಘಟನೆಯನ್ನು ರಾಷ್ಟ್ರೀಯ ದುರಂತ ಎಂದು ಘೋಷಿಸಲು ಆಗ್ರಹಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!