Monday, November 23, 2026

ಪ್ರಾಯೋಗಿಕ ಆವೃತ್ತಿ

ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ಸಿ.ಎಸ್.ಪುಟ್ಟರಾಜು ನಿರ್ಧಾರ

ರಾಜ್ಯ ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ವಾಡಿಕೆಯಷ್ಟು ಮಳೆ ಬಾರದೆ ಇರುವುದರಿಂದ ಈ ಬಾರಿ ತಮ್ಮ ಜನ್ಮದಿನಾಚರಣೆಯನ್ನು ಆಚರಿಸಿಕೊಳ್ಳುತ್ತಿಲ್ಲ ಎಂದು ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು ತಿಳಿಸಿದ್ದಾರೆ.

ಈ ಸಂಬಂಧ ಮಾಧ್ಯಮ ಹೇಳಿಕೆ ನೀಡಿರುವ ಅವರು, ಪ್ರತಿ ವರ್ಷ ಮಹಾಲಯ ಅಮಾವಾಸ್ಯೆ ದಿನದಂದು ನನ್ನ ಹುಟ್ಟು ಹಬ್ಬವನ್ನು ಆಚರಿಸಲಾಗುತ್ತಿತ್ತು. ಆದರೆ, ಈ ಬಾರಿ ಜಿಲ್ಲಾದ್ಯಂತ ಬರ ಪರಿಸ್ಥಿತಿ ತಲೆದೂರಿರುವುದರಿಂದ ಅ.೧೪ರಂದು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದು ಸೂಕ್ತವಲ್ಲ. ಈ ಹಿನ್ನೆಲೆಯಲ್ಲಿ ಜಾ.ದಳದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿತೈಷಿಗಳು ನನ್ನ ಹುಟ್ಟುಹಬ್ಬವನ್ನು ಆಚರಿಸಬೇಡಿ, ಹುಟ್ಟುಹಬ್ಬಕ್ಕೆ ಶುಭ ಕೋರಿ ಯಾರೂ ಸಹ ಫ್ಲೆಕ್ಸ್, ಬ್ಯಾನರ್‌ಗಳನ್ನು ಹಾಕಬಾರದೆಂದು ಮನವಿ ಮಾಡಿದ್ದಾರೆ.

ಮಳೆ ಬಾರದಿದ್ದರೂ ಜಿಲ್ಲಾ ರೈತರ ಜೀವನಾಡಿ ಕೃಷ್ಣರಾಜ ಸಾಗರ ಜಲಾಶಯ ತುಂಬದಿದ್ದರೂ ಸಿಡಬ್ಲ್ಯೂ ಸಿಆರ್ ಮತ್ತು ಸಿಡಬ್ಲ್ಯೂ ಎಂಎ ಆದೇಶದಂತೆ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುತ್ತಿರುವುದರಿಂದ ಕನ್ನಂಬಾಡಿ ಕಟ್ಟೆ ಬರಿದಾಗಿದೆ. ಇದನ್ನು ವಿರೋಧಿಸಿ ಜಿಲ್ಲಾದ್ಯಂತ ಕಳೆದ ಎರಡು ತಿಂಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದು, ರೈತರು ತೆಗೆದುಕೊಳ್ಳುವ ನಿರ್ಧಾರಕ್ಕೆ ನನ್ನ ಬೆಂಬಲ ಸದಾ ಇರುತ್ತದೆ ಎಂದು ಪುಟ್ಟರಾಜು ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ