Tuesday, November 24, 2026

ಪ್ರಾಯೋಗಿಕ ಆವೃತ್ತಿ

ದೆಹಲಿ ಬಾಂಬ್ ಸ್ಪೋಟ : ರಾಜ್ಯದಲ್ಲೂ ಕಟ್ಟೆಚ್ಚರ

ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರ್ ಸ್ಪೋಟದಿಂದ ಹಲವರು ಸಾವಿಗೀಡಾದ ಸುದ್ದಿ ನೋವಿನ‌ ಜೊತೆಗೆ ದಿಗ್ಭ್ರಮೆ ಉಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ದೆಹಲಿಯ ಸ್ಪೋಟ ಪ್ರಕರಣವನ್ನು ರಾಜ್ಯ ಸರ್ಕಾರವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.

ಜನನಿಬಿಡ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಿ, ಜನರ ಸುರಕ್ಷತೆಗೆ ಆದ್ಯತೆ ನೀಡುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಯಾವುದೇ ತರನಾದ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಕೂಡ ಪೊಲೀಸ್ ಇಲಾಖೆಯ ಜೊತೆ ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ