Thursday, September 19, 2024

ಪ್ರಾಯೋಗಿಕ ಆವೃತ್ತಿ

ನವದೆಹಲಿ | ವ್ಯಕ್ತಿಯೋರ್ವ ಸಂಸತ್ ಭವನದ ಬಳಿ ಬೆಂಕಿ ಹಚ್ಚಿಕೊಳ್ಳಲು ಯತ್ನ

ಇಲ್ಲಿನ ಸಂಸತ್ ಭವನದ ಬಳಿ ಗುರುವಾರ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ರೋಹಿಣಿ ನಿವಾಸಿ ರಾಜ್ ಕುಮಾರ್ ಶರ್ಮಾ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಸದ್ಯಕ್ಕೆ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಸ್ಪತ್ರೆಗೆ ಕರೆದೊಯ್ಯುವ ಮೊದಲು, ಅವರು “ದೇಶ್ ಕೋ ಬಚಾ ಲೋ (ದೇಶವನ್ನು ಉಳಿಸಿ)” ಎಂದು ಕೂಗುತ್ತಿದ್ದರು.

ಆತ ತನ್ನ ಜೀವನವನ್ನು ಕೊನೆಗೊಳಿಸಲು ಪ್ರಯತ್ನಿಸುತ್ತಿರುವ ಹಿಂದಿನ ಕಾರಣ ಇನ್ನೂ ಪತ್ತೆಯಾಗಿಲ್ಲ, ಈ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!