Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಕಾವೇರಿ ಅನ್ಯಾಯ ಖಂಡಿಸಿ ಪ್ರಧಾನಿಗೆ ರಕ್ತಪತ್ರ ರವಾನೆ

ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ, ರೈತರಿಗೆ ಮರಣ ಶಾಸನ ವಾಗಿರುವ ಕಾವೇರಿ ನ್ಯಾಯಾಧೀಕರಣ ಹಾಗೂ ಸುಪ್ರೀಂ ಕೋರ್ಟ್ ಆದೇಶ ರೈತ ವಿರೋಧಿಯಾಗಿದೆ ಎಂದು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮಳವಳ್ಳಿಯಲ್ಲಿ ರಕ್ತಪತ್ರಗಳನ್ನು ಬರೆದು ಪ್ರಧಾನಿ ನರೇಂದ್ರಮೋದಿಯವರಿಗೆ ರವಾನೆ ಮಾಡಿದರು.

ಮಳವಳ್ಳಿ ತಾಲೂಕು ಅಧ್ಯಕ್ಷ ಅಪ್ಪೇಗೌಡ ನೇತೃತ್ವದಲ್ಲಿ ರಕ್ತಪತ್ರ ಬರೆದ ಕಾರ್ಯಕರ್ತರು, ಕನ್ನಂಬಾಡಿ ಕಟ್ಟೆಯಲ್ಲಿ ನೀರು ಖಾಲಿಯಾಗಿದ್ದು, ಕುಡಿಯುವ ನೀರು ಸೇರಿದಂತೆ ಜನ ಜಾನುವಾರುಗಳು ಕುಡಿಯುವ ನೀರಿಗಾಗಿ ಪರಿತಪಿಸುತ್ತಿವೆ. ಕೂಡಲೇ ಪ್ರಧಾನಿಯವರು ಮಧ್ಯಸ್ಥಿಕೆ ವಹಿಸಿ, ನಮ್ಮ ಕಾವೇರಿ ನೀರನ್ನು ರಕ್ಷಿಸಿ ಕೊಡಬೇಕು ಎಂದು ಆಗ್ರಹಿಸಿದರು. ಅಂಚೆ ಮುಖಾಂತರ ಪ್ರಧಾನ ಮಂತ್ರಿಗಳಿಗೆ ಕಳಿಸಿಕೊಟ್ಟರು.

ಈ ಸಂದರ್ಭದಲ್ಲಿ ಕರವೇ ತಾಲೂಕು ಮಹಿಳಾ ಅಧ್ಯಕ್ಷೆ ವಿಜಯ, ಎಚ್ ಸಿ  ಗಂಗರಾಜು, ಮಲ್ಲಿಕಾರ್ಜುನ, ಸಿದ್ದಪ್ಪ, ಮಂಜುಳಾ, ಮಂಗಳ, ಜಗದೀಶ್ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!