Tuesday, May 21, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| 45 ಮೀನುಗಾರರಿಗೆ ತೆಪ್ಪ ಹರಿಗೋಲು ವಿತರಣೆ

ಮಳವಳ್ಳಿ ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ 45 ಫಲಾನುಭವಿಗಳಿಗೆ ತೆಪ್ಪ ಹಾಗೂ ಹರಿಗೋಲನ್ನು ಶಾಸಕ ಪಿ.ಎಂ ನರೇಂದ್ರಸ್ವಾಮಿ ವಿತರಣೆ ಮಾಡಿದರು.

ನಂತರ ಮಾತನಾಡಿದ ಅವರು, ಮಳವಳ್ಳಿ ತಾಲ್ಲೂಕಿನಲ್ಲಿ ಮೀನುಗಾರಿಕೆಯನ್ನು ನಂಬಿ ಹಲವಾರು ಕುಟುಂಬಗಳು ಜೀವನ ಸಾಗಿಸುತ್ತಿವೆ, ವಿವಿಧ ಯೋಜನೆಯಡಿ ಈಗಾಗಲೇ ಅರ್ಹ ಫಲಾನುಭವಿಗಳಿಗೆ ಬೋಟ್‌ಗಳನ್ನು ವಿತರಣೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಶಾಸಕರ ಸಹಕಾರದೊಂದಿಗೆ ಹರಿಗೋಲು, ಬಲೆ ಹಾಗೂ ಸೈಕಲ್‌ಗಳನ್ನು ವಿತರಣೆ ಮಾಡಲಾಗುವುದು ಎಂದರು.

ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಪೂಜಾಶ್ರೀ ಮಾತನಾಡಿ, 2022-23ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ್  ಯೋಜನೆಯಡಿ 30 ಫಲಾನುಭವಿಗಳಿಗೆ ಹಾಗೂ 2023-24 ಸಾಲಿನ ರಾಜ್ಯವಲಯ ಯೋಜನೆಯಡಿ 15 ಫಲಾನುಭವಿಗಳಿಗೆ ಮೀನುಗಾರಿಕೆ ಇಲಾಖೆಗೆ ಅನುಕೂಲವಾಗುವಂತೆ ಉಚಿತವಾಗಿ ಹರಿಗೋಲನ್ನು ಶಾಸಕರ ವತಿಯಿಂದ ವಿತರಿಸಲಾಗಿದೆ, ಫಲಾನುಭವಿಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಟಿಎಪಿಸಿಎಂಎಸ್ ನಿರ್ದೇಶಕ ಕೆ.ಜೆ ದೇವರಾಜ್, ಪುರಸಭೆ ಮಾಜಿ ಅಧ್ಯಕ್ಷ ದೊಡ್ಡಯ್ಯ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಚಂದ್ರಕುಮಾರ್, ಮುಖಂಡರಾದ ಶಿವರಾಜ್, ಚೇತನ್, ಶ್ರೀನಿವಾಸ್, ಶಿವಕುಮಾರ್ ಸೇರಿದಂತೆ ಇತರರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!