Thursday, May 16, 2024

ಪ್ರಾಯೋಗಿಕ ಆವೃತ್ತಿ

ಮನ್ ಮುಲ್ ಹಾಲು-ನೀರು ಹಗರಣ ಸಿಬಿಐ ತನಿಖೆಗೆ ಆಗ್ರಹ

ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ನಡೆದಿರುವ ಹಾಲು – ನೀರು ಹಾಗೂ ನೇಮಕಾತಿ ಹಗರಣವನ್ನು ಸಿಬಿಐ ತನಿಖೆಗೊಳಪಡಿಸಬೇಕು. ತನಿಖೆಯ ಪಾರದರ್ಶಕತೆಗಾಗಿ ಹಾಲು ಒಕ್ಕೂಟದ ಆಡಳಿತ ಮಂಡಳಿಯನ್ನು ವಿಸರ್ಜಿಸಬೇಕೆಂದು ಜಿಲ್ಲಾ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ತೂಬಿನಕರೆ ಜವರೇಗೌಡ ಒತ್ತಾಯಿಸಿದರು.

ನಾಗಮಂಗಲದಲ್ಲಿ ಸುದ್ದಿಗೋ‍ಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಹೈನುಗಾರರಿಗೆ ಆಸರೆಯಾಗಬೇಕಿದ್ದ ಹಾಲು ಒಕ್ಕೂಟದಲ್ಲಿ ನಡೆದಿರುವ ಹಲವು ಹಗರಣಗಳು ಹೈನುಗಾರರ ಸಂಕಷ್ಟಕ್ಕೆ ಹಿಡಿದ ಕೈಗನ್ನಡಿಯಾಗಿದ್ದು, ಹಾಲು – ನೀರು, ನೇಮಕಾತಿ ಹಗರಣ ಮತ್ತು 72 ಕೋಟಿ ರೂಪಾಯಿ ವಸೂಲಿಗೆ ಆದೇಶ ನೀಡಿರುವ ನ್ಯಾಯಾಲಯದ ಪ್ರಕರಣಗಳನ್ನು ನೂತನ ಸರ್ಕಾರ ಗಂಭೀರವಾಗಿ ಪರಿಗಣಿಸಿ ಹೈನುಗಾರರ ಹಿತ ಕಾಪಾಡಬೇಕೆಂದು ಆಗ್ರಹಿಸಿದರು.

nudikarnataka.com

ಜಿಲ್ಲಾ ಹಾಲು ಒಕ್ಕೂಟದಲ್ಲಿ ನಡೆದಿರುವ ಹಲವು ಅಕ್ರಮಗಳನ್ನು ಪಾರದರ್ಶಕವಾಗಿ ತನಿಖೆ ಮಾಡಲು ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಆಡಳಿತ ಮಂಡಳಿಯನ್ನು ವಜಾಗೊಳಿಸಬೇಕು. ಸಂಸ್ಥೆಯ ಕಾರ್ಯ ಚಟುವಟಿಕೆಯ ಮೇಲೆ ಸರ್ಕಾರ ನಿಗಾ ವಹಿಸಬೇಕೆಂದು ಮನವಿ ಮಾಡಿದರು.

ಎಪಿಎಂಸಿ ಕಾಯ್ದೆ ರದ್ದತಿಗೆ ಮಂಡಿಸಲಿ

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಮಾರಕ ಕೃಷಿ ಕಾಯ್ದೆ ವಿರೋಧಿಸಿ ಪಂಜಾಬ್ ರೈತರು ನಡೆಸಿದ ತೀವ್ರ ಪ್ರತಿಭಟನೆಗೆ ಮಣಿದು ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ ಆದರೆ ರಾಜ್ಯದ ರೈತರಿಗೆ ಹೊರೆಯಾಗಿರುವ ಎಪಿಎಂಸಿ ಕಾಯ್ದೆ ರದ್ದತಿಗೆ ಮುಂದಾಗದ ಬಿಜೆಪಿ ಸರ್ಕಾರವನ್ನು ರಾಜ್ಯದ ಜನತೆ ತಿರಸ್ಕರಿಸಿದ್ದು, ಸದರಿ ಕಾಯ್ದೆ ರದ್ದತಿಗೆ ನೂತನ ಕೃಷಿ ಸಚಿವರು ಆಸಕ್ತಿ ತಾಳಬೇಕೆಂದು ಜವರೇಗೌಡ ಒತ್ತಾಯಿಸಿದರು.

ರಾಜ್ಯದ ಮೇದಾವಿ ಸಚಿವರಾಗಿದ್ದ ಚಿಕ್ಕೇಗೌಡ, ಸಿ.ಭೈರೇಗೌಡ, ಕೃಷ್ಣ ಭೈರೇಗೌಡ್ರು ನಿರ್ವಹಿಸಿದ್ದ ಕೃಷಿ ಖಾತೆಯ ನಿರ್ವಹಣೆಯನ್ನು ಕೃಷಿ ಪ್ರಧಾನ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಶಾಸಕ ಎನ್.ಚಲುವರಾಯಸ್ವಾಮಿ ಅವರಿಗೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಅಭಿನಂದಿಸುವುದಾಗಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸಾವಯವ ಕೃಷಿ ಸಂಸ್ಥೆಯ ಉಪಾಧ್ಯಕ್ಷ ಹೆಚ್.ಟಿ.ಕೃಷ್ಣೇಗೌಡ, ಯುವ ಕಾಂಗ್ರೆಸ್ ಮುಖಂಡ ರವಿಕಾಂತೇಗೌಡ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!