Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಸಮರ್ಪಕ ವಿದ್ಯುತ್ ಗೆ ಆಗ್ರಹಿಸಿ ರೈತರ ಪ್ರತಿಭಟನೆ

ಕೃಷಿ ಪಂಪ್ ಸೆಟ್ ಗಳಿಗೆ ಪ್ರತಿನಿತ್ಯ ಹತ್ತು ಗಂಟೆಗಳ ಕಾಲ ವಿದ್ಯುತ್ ಅನ್ನು ಹಗಲು ಹೊತ್ತಿನಲ್ಲಿ ಪೂರೈಕೆ ಮಾಡಬೇಕೆಂದು ಒತ್ತಾಯಿಸಿ ರೈತರು ಮಂಡ್ಯ ಸೆಸ್ಕ್ ಕಚೇರಿಗೆ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ರೈತಸಂಘದ ನೇತೃತ್ವದಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಸಿದ ರೈತರು, ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯಿಂದ ಈಗಾಗಲೇ ರೈತರ ಬದುಕು ಸಂಕಷ್ಟದಲ್ಲಿದ್ದು, ಸರ್ಕಾರ ಅನಿಯಮಿತವಾಗಿ ವಿದ್ಯುತ್ ಕಡಿತ ಮಾಡುತ್ತಿರುವುದರಿಂದ ಬೆಳೆದು ನಿಂತಿರುವ ಬೆಳೆಗಳಿಗೆ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ದೂರಿದರು.

ರಾತ್ರಿ ವೇಳೆ ವಿದ್ಯುತ್ ಪೂರೈಕೆ ಕೆಲ ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡುತ್ತಿರುವುದರಿಂದ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ರೈತರು ಜಮೀನಿನತ್ತ ಹೋಗಲು ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ, ಇದರಿಂದ ಕಬ್ಬು ಮತ್ತು ಭತ್ತದ ಬೆಳೆ ಒಣಗುತ್ತಿವೆ. ಆದ್ದರಿಂದ ಹಗಲು ವೇಳೆಯಲ್ಲಿಯೇ ಸಮರ್ಪಕ ವಿದ್ಯುತ್ ಒದಗಿಸಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರೈತಸಂಘದ ಶಿವಳ್ಳಿ ಚಂದ್ರು, ಜವರೇಗೌಡ, ಚಿಕ್ಕಮಂಡ್ಯ ನಾಗರಾಜು, ರಾಮಲಿಂಗೇಗೌಡ, ಸಣ್ಣಪ್ಪ, ಕರುನಾಡ ಸೇವಕರು ಸಂಘಟನೆಯ ಎಂ.ಬಿ. ನಾಗಣ್ಣಗೌಡ, ರಾಮಚಂದ್ರ ಮತ್ತಿತರರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!