Tuesday, June 25, 2024

ಪ್ರಾಯೋಗಿಕ ಆವೃತ್ತಿ

ಲಂಚಕ್ಕೆ ಬೇಡಿಕೆ : ಮಹಿಳಾ ಅಧಿಕಾರಿ ಬಂಧನ

ಪ್ರಸ್ತುತ ಸಂದರ್ಭದಲ್ಲಿ ಲಂಚ ವ್ಯಾಪಕವಾಗಿ ಎಲ್ಲೆಡೆ ವ್ಯಾಪಿಸಿದೆ. ಪುರುಷ ಮತ್ತು ಮಹಿಳಾ ಅಧಿಕಾರಿ ಎನ್ನದೆ ಎಲ್ಲರೂ ಲಂಚದ ಪಾಲುದಾರರಾಗಿರುವುದು ವಿಪರ್ಯಾಸದ ಸಂಗತಿ.

ಅಂದ ಹಾಗೆ ಲಂಚಕ್ಕೆ ಬೇಡಿಕೆಯಿಟ್ಟ ಮಹಿಳಾ ಅಧಿಕಾರಿಯೊಬ್ಬರು ಎಸಿಬಿ ಬಲೆಗೆ ಬಿದ್ದು ಜೈಲು ಪಾಲಾಗಿರುವ ಘಟನೆ ಇಂದು ನಡೆದಿದೆ.

ಮಂಡ್ಯದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮಹಿಳಾ ಅಧಿಕಾರಿ ಕೆ.ಆರ್.ಹೇಮಲತಾ ಎಂಬಾಕೆ 15,000 ರೂ. ಲಂಚ ಪಡೆದು ಎಸಿಬಿ ಬಲೆಗೆ ಬಿದ್ದವರು.

ಮಳವಳ್ಳಿ ತಾಲೂಕಿನ ಗುಂಡಾಪುರ ಗ್ರಾಮದ ವ್ಯಕ್ತಿಯೊಬ್ಬರು ಪೆಟ್ರೋಲ್ ಬಂಕ್ ತೆರೆಯಲು ಜಿಲ್ಲಾಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಬಂಕ್ ತೆರೆಯಲು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪ್ರಮಾಣ ಪತ್ರವನ್ನು ತರುವಂತೆ ಅರ್ಜಿದಾರರಿಗೆ ತಿಳಿಸಲಾಗಿತ್ತು.

ಅರ್ಜಿದಾರನು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪ್ರಮಾಣ ಪತ್ರವನ್ನು ಪಡೆಯುವುದಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಹೇಮಲತಾ ಅವರು 30,000 ಲಂಚ ಕೊಡುವಂತೆ ಅರ್ಜಿದಾರನಿಗೆ ಒತ್ತಾಯಿಸಿದ್ದಾರೆ. ಇದರಿಂದ ಬೇಸತ್ತ ಅರ್ಜಿದಾರನು ಲಂಚದ ಪ್ರಕರಣವನ್ನು ಎಸಿಬಿ ಅಧಿಕಾರಿಗಳಿಗೆ ತಿಳಿಸಿದ್ದರು.

ಅದರಂತೆ ಇಂದು 15,000 ಹಣದೊಂದಿಗೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಗೆ ಬಂದ ಅರ್ಜಿದಾರನು, ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿ‌ ಹೇಮಲತಾ ಅವರಿಗೆ ಹಣ ನೀಡುತ್ತಿದ್ದ ವೇಳೆ, ಎಸಿಬಿ ಅಧಿಕಾರಿಗಳು ಲಂಚ ಪಡೆಯುತ್ತಿದ್ದ ಮಹಿಳಾ ಅಧಿಕಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಎಸಿಬಿ ಅಧಿಕಾರಿಗಳು ಹೇಮಲತಾ ಅವರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು, ನ್ಯಾಯಾಧೀಶರು ಆರೋಪಿ ಅಧಿಕಾರಿಯನ್ನು ನ್ಯಾಯಾಂಗ ಬಂಧನಕ್ಕೆ ಹಾಜರು ಪಡಿಸುವಂತೆ ತಿಳಿಸಿದ್ದಾರೆ.

ಎಸಿಬಿ ಮೈಸೂರು ವಿಭಾಗದ ಎಸ್ಪಿ ವಿ.ಜಿ.ಸಜಿತ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆ ತಂಡದಲ್ಲಿ ಡಿವೈಎಸ್ಪಿ ಧರ್ಮೇಂದ್ರ, ಇನ್ಸ್‌ಪೆಕ್ಟರ್ ವಿನೋದ್ ರಾಜ್ ,ಧರ್ಮೇಂದ್ರ, ವೆಂಕಟೇಶ್, ಮಹದೇವ್, ಮಹೇಶ್, ಪಾಪಣ್ಣ ಇನ್ನೂ ಹಲವರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!