Friday, November 20, 2026

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ | ಮಾರಸಿಂಗನಹಳ್ಳಿ ಸ್ಮಶಾನ ಅಭಿವೃದ್ದಿಗೆ ಒತ್ತಾಯ

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಂಡ್ಯ ತಾಲೂಕಿನ ಮಂಗಲ ಗ್ರಾಮ ಪಂಚಾಯಿತಿಯ ಮಾರಸಿಂಗನಹಳ್ಳಿ ಗ್ರಾಮದ ಸಾರ್ವಜನಿಕ ಸ್ಮಶಾನವನ್ನು ಅಭಿವೃದ್ಧಿಪಡಿಸುವಂತೆ ಪತ್ರಕರ್ತ ಕಾದಲ್ ಸಿದ್ದಯ್ಯ ಹಾಗೂ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಸ್ಮಶಾನ ಅಭಿವೃದ್ದಿಗೆ ಆಗ್ರಹಿಸಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರಿಗೆ ಸಾಕಷ್ಟು ಬಾರಿ ಮೌಕಿಕವಾಗಿ ಮತ್ತು ಲಿಖಿತವಾಗಿ ಮನವಿ ಪತ್ರ ಸಲ್ಲಿಸಿದ್ದರೂ ಸ್ಮಶಾನ ಅಭಿವೃದ್ಧಿ ಕಂಡಿಲ್ಲ ಎಂದು ಸ್ಥಳೀಯ ಶೋಷಿತ ಸಮುದಾಯಗಳ ನಿವಾಸಿಗಳು ದೂರಿದ್ದಾರೆ.

ಗ್ರಾಮದಲ್ಲಿ ಸುಮಾರು 5 ಎಕರೆಗೂ ಹೆಚ್ಚು ಸರ್ಕಾರಿ ಸ್ವಾಮ್ಯದ ಸಾರ್ವಜನಿಕ ಸ್ಮಶಾನವಿದ್ದು ಸುಮಾರು 200 ಮುನ್ನೂರು ವರ್ಷಗಳಿಂದ ಪರಿಸರ ಸ್ನೇಹಿ ಸ್ಮಶಾನವಾಗಿ ಅಭಿವೃದ್ಧಿ ಕಾಣದೆ ನೆನೆಗುದಿಗೆ ಬಿದ್ದಿರುವುದು ಶೋಚನೀಯವಾಗಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂದಾಯ ಗ್ರಾಮವಾಗಿರುವ ಮಾರಸಿಂಗನಹಳ್ಳಿ ಕುಗ್ರಾಮವಾಗಿದ್ದು ಅತ್ಯಾಧುನಿಕವಾಗಿ ಅಭಿವೃದ್ಧಿ ಕಾಣದೆ ಕಡಗಣನೆಗೆ ಒಳಗಾಗಿದೆ ಎಂದಿದ್ದಾರೆ.

ಮಂಗಲ ಗ್ರಾಮದಿಂದ ಮಾರಸಿಂಗನಹಳ್ಳಿಗೆ ಸಂಪರ್ಕ ಕಲ್ಪಿಸುವ ಸುಮಾರು 4 ಕಿಲೋಮೀಟರ್ ರಸ್ತೆಯು ಗುಂಡಿ ಬಿದ್ದು ಹಾಳಾಗಿದೆ. ಗ್ರಾಮದ ಅಭಿವೃದ್ಧಿಗಾಗಿ ಮತ್ತು ಪರಿಸರ ಸ್ನೇಹಿ ಸ್ಮಶಾನ ಅಭಿವೃದ್ಧಿಗಾಗಿ ಒಟ್ಟಾರೆ 10 ಕೋಟಿ ರೂ.ಗಳನ್ನು ಶಾಸಕರು ತಮ್ಮ ಅನುದಾನದಲ್ಲಿ ಬಿಡುಗಡೆ ಮಾಡಿ ಅಭಿವೃದ್ಧಿ ಪಡಿಸುವಂತೆ ಗ್ರಾಮಸ್ಥರರು ಒತ್ತಾಯಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ