Saturday, November 21, 2026

ಪ್ರಾಯೋಗಿಕ ಆವೃತ್ತಿ

ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬದ ಸಾಲಮನ್ನಾಕ್ಕೆ ಒತ್ತಾಯ

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಾಳಕೆಂಪನದೊಡ್ಡಿ ಗ್ರಾಮದ ರಾಮಲಿಂಗ ಎಂಬ ರೈತ ಜಮೀನಿನಲ್ಲಿ ಸಾಲ ಮಾಡಿ ಬಾಳೆ ಬೆಳೆಯನ್ನು ಬೆಳೆದಿದ್ದು, ಆ ಬಾಳೆ ಬೆಳೆಗೆ ಬೆಂಕಿರೋಗ ಬಂದು ಬೆಳೆ ನಾಶವಾದ ಹಿನ್ನೆಲೆಯಲ್ಲಿ ಆತ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಅವರ ಕುಟುಂಬ ಸಾಲವನ್ನು ಸಂಪೂರ್ಣ ಮನ್ನಾ ಮಾಡುವಂತೆ ಕೆ.ಆರ್.ಎಸ್ ಪಕ್ಷ ಒತ್ತಾಯಿಸಿದೆ.

ಮೃತ ರೈತನ ಮನೆಗೆ ಭೇಟಿ ನೀಡಿದ ಕೆ.ಆರ್.ಎಸ್ ಕಾರ್ಯಕರ್ತರು ಕುಟುಂಬಕ್ಕೆ ಸಾಂತ್ವನ ಹೇಳಿದ ನಂತರ ಮಳವಳ್ಳಿ ತಹಸಿಲ್ದಾರ್ ಕಚೇರಿಗೆ ಭೇಟಿ ನೀಡಿ, ಮೃತಪಟ್ಟ ರೈತ ಕುಟುಂಬದ ಎಲ್ಲಾ ಸಾಲವನ್ನು ಸಂಪೂರ್ಣವಾಗಿ ಮನ್ನ ಮಾಡಿಸಬೇಕು. ತಾತ್ಕಾಲಿಕವಾಗಿ ತಾಲ್ಲೂಕು ಆಡಳಿತದಿಂದ ಪರಿಹಾರ ಘೋಷಣೆ ಮಾಡಬೇಕು. ಸರ್ಕಾರದ ಗಮನಕ್ಕೆ ತಂದು ಮೃತ ರೈತನ ಕುಟುಂಬಕ್ಕೆ 5ಲಕ್ಷ ಪರಿಹಾರ ಕೊಡಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾ ಘಟಕದ ಕಾರ್ಯದರ್ಶಿ ನಂದೀಶ್ ಕುಮಾರ್ ಎಂ, ಯುವ ಘಟಕದ ಅಧ್ಯಕ್ಷ ಪ್ರಮೋದ ಎಸ್, ಪ್ರಧಾನ ಕಾರ್ಯದರ್ಶಿ ದೀಪಿಕಾ, ಮಳವಳ್ಳಿ ತಾಲ್ಲೂಕು ಅಧ್ಯಕ್ಷ ಮಾದೇಗೌಡ, ಉಪಾಧ್ಯಕ್ಷ  ಪರಮೇಶ ಸಿ, ಜಂಟಿ ಕಾರ್ಯದರ್ಶಿ ವಿಷಕಂಠಮೂರ್ತಿ ವಿ ಎನ್, ಪ್ರಧಾನ ಕಾರ್ಯದರ್ಶಿ ಮಹಾದೇವಸ್ವಾಮಿ ಹೆಚ್ ಎಮ್, ಕಾರ್ಯದರ್ಶಿ ಮಳವಳ್ಳಿ ರೂಪಶ್ರೀ, ಸತೀಶ್ ಎಮ್ ಎಸ್, ಹರೀಶ್, ಪೂರಿಗಾಲಿಯ ಸಿದ್ದರಾಜು, ಎಸ್ ಸಿ ಎಸ್ ಟಿ ಘಟಕದ ಅಧ್ಯಕ್ಷ ಸಿದ್ದರಾಜು, ಉಪಾಧ್ಯಕ್ಷ ಶಿವಮೂರ್ತಿ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ