Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಕಲ್ಲಡ್ಕ ಪ್ರಭಾಕರ್ ಭಟ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಮುಸ್ಲಿಂರು ಹಾಗೂ ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವ ಮೂಲಕ ಕೋಮುಗಲಭೆಗೆ ಸಂಚು ರೂಪಿಸಿರುವ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಬಂಧಿಸುವಂತೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರ ಮಂಡ್ಯದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಮಂಡ್ಯನಗರದ ಸಂಜಯ ವೃತ್ತದಿಂದ ಮೆರವಣಿಗೆ ಹೊರಟ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಶ್ರೀರಂಗಪಟ್ಟಣದಲ್ಲಿ ನಡೆದ ಹನುಮ ಜಯಂತಿ ಸಮಾವೇಶದಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮುಸ್ಲಿಂ ಮಹಿಳೆಯರಿಗೆ ಮೊದಲು ದಿನಕ್ಕೊಬ್ಬ ಗಂಡ, ಪರ್ಮನೆಂಟ್ ಗಂಡ ಕೊಟ್ಟಿರುವುದು ಮೋದಿ ಸರ್ಕಾರ ಎಂದು ಹೇಳುವ ಮೂಲಕ ಮುಸ್ಲಿಂ ಮಹಿಳೆಯರನ್ನು ಅವಹೇಳನ ಮಾಡಿದ್ದಾರೆ, ಲವ್ ಜಿಹಾದ್ ಹೆಸರಿನಲ್ಲಿ ಮುಸ್ಲಿಂ ಮಹಿಳೆಯರು ಮೋಸ ಮಾಡುತ್ತಾರೆ ಎಂದು ಸುಳ್ಳು ಹೇಳಿ, ಮುಸ್ಲಿಂ ಮಹಿಳೆಯರ ನೈತಿಕತೆ ಕುರಿತು ಅಪಪ್ರಚಾರ ಮಾಡಿದ್ದಾರೆ ಅದೇ ರೀತಿ ಮುಸ್ಲಿಂ ವಿದ್ಯಾರ್ಥಿನಿ ಮುಸ್ಕಾನ್ ಗೆ ಅಲ್ ಖೈದಾ ಉಗ್ರ ಸಂಘಟನೆಯ ಸಂಪರ್ಕ ಇದೆ. ಅವಳ ಬಗ್ಗೆ ಎಚ್ಚರ ದಿಂದ ಇರಬೇಕು ಎಂದು ಸಮಾಜಕ್ಕೆ ತಪ್ಪು ಸಂದೇಶ ನೀಡಿದಲ್ಲದೇ, ಮುಸ್ಲಿಂ ಸಮುದಾಯದ ಮಕ್ಕಳ ಶೈಕ್ಷಣಿಕ ಭವಿಷ್ಯ ಹಾಳು ಮಾಡುವ ದುರುದ್ದೇಶದ ಹಿನ್ನೆಲೆಯಲ್ಲಿ ಮುಸ್ಸಾನ್ ತಾಕತ್ತಿದ್ದರೆ ಶಾಲೆಗೆ ಹೋಗಲಿ ಎಂದು ಎಚ್ಚರಿಕೆ ನೀಡುತ್ತಿದ್ದೇನೆ ಎನ್ನುವ ಮೂಲಕ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದರು.

ಮುಸ್ಲಿಂ ಸಮುದಾಯದವರು ತೆರಿಗೆ ಪಾವತಿಸಲ್ಲ, ಮೋಸ ಮಾಡುವವರು ಎಂದು ಹೇಳುವ ಮೂಲಕ ಸಮುದಾಯದ ಬಗ್ಗೆ ಸಮಾಜದಲ್ಲಿ ಅನುಮಾನದ ದೃಷ್ಟಿಯಿಂದ ನೋಡುವಂತಹ ವಾತಾವರಣ ಸೃಷ್ಟಿಸುವ ಹುನ್ನಾರ ಮಾಡಿದ್ದಾರೆ ಎಂದು ತಿಳಿಸಿದರು.

ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ರಾಜ್ಯದಲ್ಲಿ ಕೋಮು ಗಲಭೆ ಸೃಷ್ಟಿಸುವ ಸಂಚು ಮಾಡಿದ್ದು, ಈ ಬಗ್ಗೆ ದೂರು ದಾಖಲಾಗಿ ಎಫ್ಐಆರ್ ಆಗಿದ್ದರೂ ಇಲ್ಲಿಯವರೆಗೂ ಪೊಲೀಸ್ ಇಲಾಖೆ ಕಿಡಿಗೇಡಿಯನ್ನು ಬಂಧನ ಮಾಡದೇ ಇರುವುದು ಖಂಡನೀಯ. ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿಯದೆ ಗೂಂಡಾ ಕಾಯ್ದೆಯಡಿಯಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ನನ್ನ ಬಂದಿಸಬೇಕು ಎಂದು ಆಗ್ರಹಿಸಿದರು.

ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷ ಸಾದತ್ ಪಾಷಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಕ್ತಾರ್ ಅಹಮದ್, ಕಾರ್ಯದರ್ಶಿ ಅತೀಕ್ ಅಹಮದ್ ನೇತೃತ್ವ ವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!