Saturday, November 21, 2026

ಪ್ರಾಯೋಗಿಕ ಆವೃತ್ತಿ

ಸ್ನೇಹಮಯಿ ಕೃಷ್ಣ ಬಂಧನಕ್ಕೆ ಕಾಂಗ್ರೆಸ್ ಆಗ್ರಹ ; ಮತ್ತೊಂದು ದೂರು ದಾಖಲು

ಸಾರ್ವಜನಿಕ ವಲಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಕೆಟ್ಟ ಅಭಿಪ್ರಾಯ ಮೂಡಿಸುತ್ತಿರುವ ರೌಡಿಶೀಟರ್ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸುವಂತೆ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ಸ್ನೇಹಮಯಿ ಕೃಷ್ಣ ಒಬ್ಬ ರೌಡಿಶೀಟರ್ ಆಗಿದ್ದು, ಆತನ ಮೇಲೆ 44 ಪ್ರಕರಣಗಳಿವೆ. ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ದಾಖಲೆ ಬಿಡುಗಡೆ ಮಾಡುತ್ತಿದ್ದಾನೆ. ಸಾರ್ವಜನಿಕ ವಲಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೆಟ್ಟ ಅಭಿಪ್ರಾಯ ಮೂಡಿಸುತ್ತಿದ್ದಾನೆ. ಆದ್ದರಿಂದ ಈತನನ್ನು ಕೂಡಲೇ ಬಂಧಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ರೌಡಿಶೀಟರ್ ಆಗಿರುವ ಈತ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಹೆಸರಿನಲ್ಲಿ ಸುಳ್ಳು ದಾಖಲೆ ಬಿಡುಗಡೆ ಮಾಡುತ್ತಿದ್ದಾನೆ. ಆತ ಬಿಡುಗಡೆ ಮಾಡಿರುವ ಹಣ ಕಟ್ಟಿರುವ ಚಲನ್ ಸುಳ್ಳು ದಾಖಲೆಯಾಗಿದೆ. ಆತ ಬಿಡುಗಡೆ ಮಾಡಿರುವ ದಾಖಲೆಗಳು ಸುಳ್ಳು ಎಂದು ಮುಡಾ ಅಧಿಕಾರಿಗಳೇ ಹೇಳಿದ್ದಾರೆ. ಈತನನ್ನು ಕೂಡಲೇ ಬಂಧಿಸದಿದ್ದರೆ ನಾಳೆಯಿಂದ ಧರಣಿ ಸತ್ಯಾಗ್ರಹ ಮಾಡುತ್ತೇವೆ ಎಂ.ಲಕ್ಷ್ಮಣ್ ಎಚ್ಚರಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ