Saturday, November 21, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಸೋನು ನಿಗಮ್ ಬಂಧನಕ್ಕೆ ಕನ್ನಡ ಸೇನೆ ಆಗ್ರಹ

ಕನ್ನಡ ನಾಡಿನಲ್ಲಿ ಕನ್ನಡಿಗರನ್ನು ಗೂಂಡಾಗಳು ಮತ್ತು ಭಯೋತ್ಪಾದಕರೆಂದು ಅವಮಾನಿಸಿರುವ ಗಾಯಕ ಸೋನುನಿಗಮ್‌ ಅವರನ್ನು ಕೂಡಲೇ ಬಂಧಿಸಬೇಕೆಂದು ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ಮಂಡ್ಯ ಅಪರ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.

ಮೂರು ಸಾವಿರ ವರ್ಷ ಹಾಗೂ ದೇಶದ ಎಲ್ಲಾ ಭಾಷೆಯ ತಾಯಿ ಭಾಷೆ ಕನ್ನಡಕ್ಕೆ ಅವಮಾನಿಸಿದ ಯಾವುದೇ ವ್ಯಕ್ತಿಯಾದರೂ ಅವರಿಗೆ 24 ಗಂಟೆ ಒಳಗಡೆ ಕಠಿಣವಾದ ಕಾನೂನು ಕ್ರಮ ಕೈಗೊಳ್ಳುವ ಕಾನೂನನ್ನು ತರಬೇಕು. ಕನ್ನಡಿಗರನ್ನು ಕೀಳಾಗಿ ಕಂಡಿರುವುದು ಮಾತ್ರವಲ್ಲ. ಕನ್ನಡಿಗರನ್ನು ದೇಶದ್ರೋಹಿಗಳೆಂದು ಬಿಂಬಿಸಿ, ಅವರನ್ನು ಖಳನಾಯಕರನ್ನಾಗಿ ಮಾಡಿರುವ ಹುನ್ನಾರ ನಡೆಯುತ್ತಿದೆ. ಕೂಡಲೇ ಅವರ ಮೇಲೆ ದೂರು ದಾಖಲಿಸಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಅಧ್ಯಕ್ಷರಾದ ಸೌಭಾಗ್ಯ, ಜಿಲ್ಲಾ ಕಾರ್ಯದರ್ಶಿ ಪವಿತ್ರ, ರಾಜ್ಯ ಸಂಚಾಲಕ ಜಿ ಮಹಾಂತಪ್ಪ, ನಗರ ಘಟಕ ಅಧ್ಯಕ್ಷ ಶಿವಾಲಿ, ಮದ್ದೂರು ತಾಲೂಕು ಅಧ್ಯಕ್ಷ ರಾಘವೇಂದ್ರ, ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷ ರಘು, ಜಿಲ್ಲಾ ಸಂಚಲಕರಾದ ಅಭಿಷೇಕ್, ಆಟೋ ಘಟಕ ಜಿಲ್ಲಾ ಅಧ್ಯಕ್ಷ ಶಿವಕುಮಾರ್, ಮದ್ದೂರು ತಾಲೂಕು ಉಪಾಧ್ಯಕ್ಷ ಪ್ರಜ್ವಲ್, ಮಂಡ್ಯ ತಾಲೂಕು ಉಪಾಧ್ಯಕ್ಷ ಯರಳ್ಳಿ. ಕುಮಾರ್, ಶ್ರೀನಿವಾಸ್. ವೇಣುಗೋಪಾಲ್, ರಾಮಕೃಷ್ಣ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ