Friday, May 17, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ನಾಲೆಗಳಿಗೆ ನೀರು ಹರಿಸಲು ಆಗ್ರಹ

ಜನ-ಜಾನುವಾರುಗಳಿಗೆ ಕುಡಿಯಲು ಹಾಗೂ ಬೆಳೆದು ನಿಂತಿರುವ ಬೆಳೆಗಳ ರಕ್ಷಣೆಗಾಗಿ ಕೃಷ್ಣರಾಜಸಾಗರ ಜಲಾಶಯದ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು ಹರಿಸಬೇಕೆಂದು ಸರ್ಕಾರ ಹಾಗೂ ಜಿಲ್ಲಾಡಳಿತವನ್ನು ರಾಜ್ಯ ರೈತಸಂಘದ (ರೈತ ಬಣ) ರಾಜ್ಯಾಧ್ಯಕ್ಷ ಇಂಗಲಕುಪ್ಪೆ ಕೃಷ್ಣೇಗೌಡ ಆಗ್ರಹಿಸಿದರು.

ನಾಲೆಗಳಿಗೆ ನೀರು ಹರಿಸದ ಹಿನ್ನೆಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯಲು ನೀರು ಇಲ್ಲದಂತಾಗಿ ತೊಂದರೆ ಅನುಭವಿಸುತ್ತಿವೆ. ಬೆಳೆದು ನಿಂತಿರುವ ಬೆಳೆಗಳು ಒಣಗುತ್ತಿವೆ. ಶೇ. 85ರಷ್ಟು ಕಬ್ಬು ಕಟಾವು ಆಗಿದ್ದು, ಇನ್ನೂ ಶೇ. 15ರಷ್ಟು ಕಬ್ಬು ಬೆಳೆದು ನಿಂತಿದೆ. ಇದನ್ನು ರಕ್ಷಿಸಲು ಕೂಡಲೇ ನಾಲೆಗಳಿಗೆ ನೀರು ಹರಿಸಬೇಕು. ಇಲ್ಲದಿದ್ದಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಮಂಡ್ಯದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.

ಸಂಕ್ರಾಂತಿ ಹಬ್ಬ ಆಚರಣೆ ಸಂದರ್ಭದಲ್ಲಿ ಕುಡಿಯಲು ನೀರಿಲ್ಲದೆ ಜನ-ಜಾನುವಾರುಗಳು ತೊಂದರೆ ಅನುಭವಿಸುತ್ತಿವೆ. ಕೊಳವೆ ಬಾವಿಗಳಲ್ಲಿ ಅಂತರ್ಜಲ ಬತ್ತಿ ಹೋಗಿದೆ. ಬೆಳೆದು ನಿಂತಿರುವ ಬೆಳೆಗಳು ಒಣಗಿ ಹೋಗುತ್ತಿವೆ. ಕನಿಷ್ಠ ಪಕ್ಷ ತಿಂಗಳಿಗೊಮ್ಮೆ ನಾಲೆಗಳಿಗೆ ನೀರು ಬಿಡಬೇಕು, ಇಲ್ಲದಿದ್ದರೆ ಜನತೆ ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಹೇಳಿದರು.

ಎಕರೆಗೆ 25 ಸಾವಿರ ರೂ. ಪರಿಹಾರ ನೀಡಿ

ಸರ್ಕಾರ ಪ್ರತಿ ಎಕರೆಗೆ 2 ಸಾವಿರ ರೂ. ಬರ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದು, ಇದು ಸಾಕಾಗಲ್ಲ. ಕನಿಷ್ಠ 25 ಸಾವಿರ ರೂ. ನೀಡಬೇಕು. ಜಿಲ್ಲೆಯವರೇ ಆದ ಶಾಸಕ ಎನ್. ಚಲುವರಾಯಸ್ವಾಮಿ ಅವರು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿರುವುದರಿಂದ ಸರ್ಕಾರದ ಮೇಲೆ ಒತ್ತಡ ತಂದು ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ಕೊಡಿಸಬೇಕೆಂದು ಆಗ್ರಹಿಸಿದರು.

ಗೋಷ್ಠಿಯಲ್ಲಿ ರಾಜ್ಯ ರೈತಸಂಘದ ಮುಖಂಡರಾದ ಹೆಮ್ಮಿಗೆ ಚಂದ್ರಶೇಖರ್, ಹನಿಯಂಬಾಡಿ ತಮ್ಮಣ್ಣ ಹಾಗೂ ಕಾರಸವಾಡಿ ಕಂಠೀರವ ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!