Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಅವೈಜ್ಞಾನಿಕ ಹೆದ್ದಾರಿ ಕಾಮಗಾರಿ ಸರಿಪಡಿಸಲು ಆಗ್ರಹ

ಮಂಡ್ಯ ಹೊರವಲಯದ ಅಮರಾವತಿ ಹೋಟೆಲ್ ನಿಂದ ಜ್ಯೋತಿ ಇಂಟರ್ ನ್ಯಾಶನಲ್ ಹೋಟೆಲ್ ವರೆಗೆ ನಡೆಯುತ್ತಿರುವ ಬೆಂಗಳೂರು ಮೈಸೂರು ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿದೆಯೆಂದು ಕನ್ನಡಪರ ಸಂಘಟನೆಗಳು ಆಕ್ಷೇಪಿಸಿದ ಹಿನ್ನೆಲೆಯಲ್ಲಿ ಇಂದು ರಾಷ್ಟೀಯ ಹೆದ್ದಾರಿ ಅಧಿಕಾರಿಯೊಂದಿಗೆ ಸಂಘಟನೆಗಳ ಮುಖಂಡರು ಕಾಮಗಾರಿ ಪರಿವೀಕ್ಷಣೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿ ಸಹಾಯಕ ಅಭಿಯಂತರ ಶಿವಕುಮಾರ್ ಅವರೊಂದಿಗೆ ಸಂಚರಿಸಿ ಕಾಮಗಾರಿಯಲ್ಲಿನ ಲೋಪಗಳನ್ನು ಅವರ ಗಮನಕ್ಕೆ ತರಲಾಯಿತು. ರಾಷ್ಟೀಯ ಹೆದ್ದಾರಿ ಮಧ್ಯ ಭಾಗದಿಂದ ಇಕ್ಕೆಲಗಳಲ್ಲಿ ೬೦ ಅಡಿ ಅಂತರದವರೆಗೆ ಯಾವುದೆ ಕಟ್ಟಡ ನಿರ್ಮಾಣಕ್ಕೆ ಅವಕಾಶವಿಲ್ಲ.ಆದರೆ ಮಂಡ್ಯ ನಗರದಲ್ಲಿ ಒತ್ತುವರಿ ತೆರವುಗೊಳಿಸದೆ ಮನಸೋಇಚ್ಚೆ ಪಾದಚಾರಿ ಮಾರ್ಗ ನಿರ್ಮಿಸಲಾಗುತ್ತಿದೆ. ಅದರಲ್ಲೂ ನಂದಾ ವೃತ್ತದಿಂದ ಮಹಾವೀರ ವೃತ್ತದವರೆಗೆ ಪಾದಚಾರಿ ಮಾರ್ಗದ ಅಪೂರ್ಣ ಕಾಮಗಾರಿಯಿಂದ ಸಾರ್ವಜನಿಕರು ಅಪಘಾತಕೀಡಾಗಿ ಪೆಟ್ಟುಗಳಾಗಿವೆ ಎಂದು ದೂರಿದರು.

ಸಮೀಕ್ಷೆ ನಂತರ ಪಾದಚಾರಿ ಮಾರ್ಗದ ನಿರ್ಮಾಣದಲ್ಲಿ ಕೆಲವು ಲೋಪಗಳಾಗಿವೆ. ಇವೆಲ್ಲವನ್ನು ಸರಿಪಡಿಸಿ ಮುಂದಿನ ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಹಾಗೂ ಹೆದ್ದಾರಿ ಅತಿಕ್ರಮಣವನ್ನು ತೆರವುಗೊಳಿಸಲು ಅಗತ್ಯ ಕ್ರಮವಹಿಸುವುದಾಗಿ ಪ್ರಾಧಿಕಾರದ ಅಧಿಕಾರಿ ಶಿವಕುಮಾರ್ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರುನಾಡ ಸೇವಕರು ಸಂಘಟನೆಯ ರಾಜ್ಯ ವಕ್ತಾರ ಎಂ.ಬಿ.ನಾಗಣ್ಣಗೌಡ, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಎಚ್ ಡಿ ಜಯರಾಂ, ರಕ್ಷಣಾ ವೇದಿಕೆಯ ಆಟೋ ಘಟಕದ ವೆಂಕಟೇಶ್, ಮುದ್ದೇಗೌಡ. ಕುಮಾರ್ ಕನ್ನಡಿಗ, ಶಿವರಾಂ ಮೊದಲಾದವರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ