ಮಂಡ್ಯ ಜಿಲ್ಲೆಯ ವಿವಿಧ ಗ್ರಾಮಗಳಿಂದ ಆಗಮಿಸುವ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸುವಂತೆ ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಈ ಸಂಬಂಧ ಮಂಡ್ಯ ಜಿಲ್ಲಾಧಿಕಾರಿ ಕಚೇರಿಗೆ ಅಧಿಕಾರಿಗೆ ಮನವಿ ಸಲ್ಲಿಸಿ, ಸರ್ಕಾರಿ ಬಸ್ ವ್ಯವಸ್ಥೆಯ ಕೊರತೆಯಿಂದ ಶಾಲಾ- ಕಾಲೇಜು ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದು, ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾ ಯುವ ಘಟಕದ ಅಧ್ಯಕ್ಷ ಪ್ರಮೋದ ಎಸ್, ಪ್ರಧಾನ ಕಾರ್ಯದರ್ಶಿ ದೀಪಿಕಾ, ಮಂಡ್ಯ ತಾಲ್ಲೂಕು ಅಧ್ಯಕ್ಷ ರವೀಂದ್ರ, ಮಳವಳ್ಳಿ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಮಹಾದೇವಸ್ವಾಮಿ ಹೆಚ್ ಎಮ್, ಮಳವಳ್ಳಿ ಎಸ್.ಸಿ.ಎಸ್.ಟಿ ಘಟಕದ ಕಾರ್ಯದರ್ಶಿ ಶಿವಮೂರ್ತಿ ಹಾಗೂ ವಿದ್ಯಾರ್ಥಿಗಳು ಭಾಗಿಯಾಗಿದ್ದರು.




